By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ

ರಾಜ್ಯ-KarnatakaLatest

ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ

State government is extorting from small traders to fill the treasury: BY Vijayendra

Published July 23, 2025
Share
2 Min Read
BY Vijayendra
SHARE

ಬೆಂಗಳೂರು: ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳ ಮೇಲೆ ಹಾಗೂ ಬೀದಿಬದಿ ವ್ಯಾಪಾರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ಕೊಟ್ಟಿದ್ದು, ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್‌ ಕಳುಹಿಸಿರುವುದು ಸರಿಯಲ್ಲ. ಈ ರೀತಿ ತೆರಿಗೆ ಇಲಾಖೆ ಮೂಲಕ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ. ಸಣ್ಣ ವ್ಯಾಪಾರಿಗಳು ಮಾಡುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣವಾಗಿ ಬೆಂಬಲ ನೀಡಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಇತರ ಸಚಿವರು ಕೇಂದ್ರ ಸರ್ಕಾರದ ಮೇಲೆ ಬೆಟ್ಟು ತೋರಿಸುತ್ತಿದ್ದಾರೆ. ಆದರೆ ಇದು ರಾಜ್ಯ ಸರ್ಕಾರದ ಕೆಲಸ. ಮುಖ್ಯವಾಗಿ ಜಿಎಸ್‍ಟಿ ವ್ಯವಸ್ಥೆಯಲ್ಲಿ 3 ಸ್ಲ್ಯಾಬ್‍ಗಳಿದ್ದು, ಹಾಲು ಮತ್ತಿತರ ಕೆಲ ವಸ್ತುಗಳು ಜಿಎಸ್‍ಟಿ ವ್ಯಾಪ್ತಿಗೆ ಬರುವುದಿಲ್ಲ, ಆದರೂ ಸಹ ವ್ಯಾಪಾರಿಗಳಿಗೆ ನೋಟಿಸ್‌ ಕೊಟ್ಟಿದ್ದಾರೆ. ಎಲ್ಲರಿಗೂ ವಾಣಿಜ್ಯ ತೆರಿಗೆ ಇಲಾಖೆಯು ಶೇ.18 ರಷ್ಟು ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದೆ. ಖಜಾನೆ ಖಾಲಿ ಆಗಿದೆ ಹಾಗಾಗಿ ಯಾವುದರ ಬಗ್ಗೆಯೂ ಗಮನಕೊಡದೇ ವ್ಯಾಪಾರಿಗಳಿಗೆ ಸಮಸ್ಯೆ ಮಾಡುತ್ತಿದ್ದಾರೆ. ಇದರಿಂದ ವ್ಯಾಪಾರಿಗಳು ಆತಂಕಗೊಂಡಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನ ವಾಪಾಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಈ ಹಿಂದೆ ಸಿದ್ದರಾಮಯ್ಯ ಅವರು ಕರ್ನಾಟಕ ಜಿಎಸ್‍ಟಿ ಸಂಗ್ರಹದ ವಿಷಯದಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದು ಹೇಳಿದ್ದರು. ಅಲ್ಲದೇ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಬೇಕು ಎಂದು ಅಧಿಕಾರಿಗಳಿಗೆ ಒತ್ತಡ ಹೇರಿ ಗುರಿಯನ್ನ ಸಹ ನೀಡಿದ್ದರು. ಇದೀಗ ಖಜಾನೆ ಖಾಲಿ ಆಗಿದೆ. ಹಾಗಾಗಿ ಅಕ್ರಮವಾಗಿ ವ್ಯಾಪಾರಿಗಳಿಗೆ ನೋಟಿಸ್‌ ಕೊಟ್ಟು ಸಂಗ್ರಹ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೇಕರಿ, ಪಾನ್‌ ಶಾಪ್‌ ಮತ್ತು ಸಣ್ಣ ಕಿರಾಣಿ ವರ್ತಕರ ಅಂಗಡಿಗಳಿಗೆ ತೆರಿಗೆ ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಜು. 25 ಕ್ಕೆ ರಾಜ್ಯಾದ್ಯಂತ ಬೇಕರಿ ಮಾಲಿಕರು ಮುಷ್ಕರಕ್ಕೆ ಕರೆ ನೀಡಿದ್ದರು. ಕೋಟಿ ಕೋಟಿ ಕಾಳಧನ ಹೊಂದಿರುವ ಸಿರಿವಂತರನ್ನು ಬಿಟ್ಟು ಬಡ ವ್ಯಾಪಾರಿಗಳನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಸಣ್ಣ ವರ್ತಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಷ್ಟು ದಿನ 1 ರೂ. ಗಳಿಂದ ಹಿಡಿದು ಸಾವಿರಾರು ರೂ. ಗಳವರೆಗೆ ಫೋನ್‌ ಪೇ, ಗೂಗಲ್‌ ಪೇ, ಪೇಟಿಎಂ ಮತ್ತಿತರ ಅಪ್ಲಿಕೇಶನ್‌ ಮೂಲಕ ಹಣ ಸ್ವೀಕರಿಸುತ್ತಿದ್ದ ವರ್ತಕರು ಈಗ ತಮಗೆ ನಗದು ಹಣವನ್ನೇ ಪಾವತಿಸುವಂತೆ ಗ್ರಾಹಕರನ್ನು ಒತ್ತಾಯಿಸುತ್ತಿದ್ದಾರೆ. ವರ್ತಕರಿಗೆ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿರುವುದಕ್ಕೆ ಬೆಂಗಳೂರಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಎಚ್ಚೆತ್ತಿರೋ ವಾಣಿಜ್ಯ ಇಲಾಖೆ ವರ್ತಕರ ಕೋಪ ತಣ್ಣಗಾಗಿಸಲು ಮುಂದಾಗಿತ್ತು.

ವಾಣಿಜ್ಯ ಇಲಾಖೆ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ವರ್ತಕರು ನೋಟಿಸ್ ಬಂದಿರುವ ಕಚೇರಿಗೆ ತೆರಳಿ ಸೂಕ್ತ ದಾಖಲಾತಿ ನೀಡಿ ವಿವರಣೆ ನೀಡಬೇಕು. ಇದ್ರಿಂದ ತೆರಿಗೆ ವಿನಾಯಿತಿ ಇರುವ ಸರಕು ಸೇವೆಗಳನ್ನು ಹೊರತುಪಡಿಸಿ, ತೆರಿಗೆ ಇರುವ ಸರಕಿಗೆ ಮಾತ್ರ ತೆರಿಗೆ ವಿಧಿಸುತ್ತಾರೆ ಎಂದಿದೆ.

You Might Also Like

ಮಂಡ್ಯ: 100 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ

ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ

ಏಪ್ರಿಲ್ 28 ಕ್ಕೆ ಪ್ರಧಾನಿ ಮೋದಿ ಶಿರಸಿಗೆ

4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಚುನಾವಣೆ ಸಂದರ್ಭದಲ್ಲಿ ರಾಜಕೀಯ ಗಿಮಿಕ್‌ : ಕೇರಳ ಸಿಎಂ ವಿರುದ್ಧ ಡಿಕೆಶಿ ಆಕ್ರೋಶ

TAGGED:#BY Vijayendra
Share This Article
Facebook Copy Link Print
Previous Article Theer Theer Theer ಚಿತ್ರದುರ್ಗ : ವಿದ್ಯುತ್ ತಂತಿ ತಗುಲಿ ಮೂವರು ಸಾವು
Next Article School Holiday Rain ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up