ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದು ಬಿಬಿಎಂಪಿ ಪಾಲಿಕೆ (BBMP) ನಿದ್ದೆ ಗೆಡಸಿದೆ. ಹೀಗಾಗಿ ಅಲರ್ಟ್ ಆಗಿರುವ ಪಾಲಿಕೆ ನಿಯಂತ್ರಣಕ್ಕೆ ಮುಂದಾಗಿದೆ.
ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಜೋರಾಗಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್‌ಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದು, ಬಿಬಿಎಂಪಿ ಎಚ್ಚೆತುಕೊಂಡು ನಿಯಂತ್ರಣಕ್ಕೆ ಭಾರೀ ಕಸರತ್ತುಗಳನ್ನ ಮಾಡುತ್ತಿವೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಕೆಆರ್‌ಎಸ್ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ
2022ರಲ್ಲಿ ಇಡೀ ವರ್ಷಕ್ಕೆ 2335 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಆದರೆ, 2023ರಲ್ಲಿ 11,136 ಕೇಸ್‌ಗಳು ಪತ್ತೆಯಾಗಿದ್ದವು. ಈ ವರ್ಷ ಜನವರಿಯಿಂದ ಜೂನ್ ತಿಂಗಳವರೆಗೆ 1530 ಡೆಂಗ್ಯೂ ಕೇಸ್‌ಗಳು ದಾಖಲಾಗಿದ್ದವು.
ರಾಜ್ಯದ ಇತರೆಡೆ ಕೂಡ ಡೆಂಗ್ಯೂ ಕೇಸ್‌ಗಳು ಹೆಚ್ಚುತ್ತಲೇ ಇವೆ. ಬೆಂಗಳೂರಿನಲ್ಲಿ ಡೆಂಗ್ಯೂ ತಡೆಯೊಡ್ಡಲು ಬಿಬಿಎಂಪಿ ಹಲವು ಕ್ರಮಗಳನ್ನ ಕೈಗೊಂಡಿದೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿತ – 6 ಮಂದಿಗೆ ಗಾಯ, ಓರ್ವ ಸಾವು
ಕರ್ನಾಟಕ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 2023ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ60 ರಷ್ಟು ಏರಿಕೆಯಾಗಿರುವ ಬಗ್ಗೆ ಕೆಲವು ದಿನಗಳ ಹಿಂದಷ್ಟೇ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತಷ್ಟು ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿನ ವಾತಾವರಣ ಆಗಾಗ ಬದಲಾಗುತ್ತಿರುವುದು, ಮಳೆ ನೀರು ನಿಲ್ಲುವುದು ಮತ್ತಿತರ ವಿಚಾರಗಳು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದ್ದು, ಇದು ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಗೆ ಪೂರಕವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಶೇ60 ರಷ್ಟು ಜನರಿಗೆ ಡೆಂಗ್ಯೂ ಬಂದಿದೆ. ಇದರ ಜೊತೆಗೆ ಇತರ ಜ್ವರದ ಕೇಸ್‌ಗಳು ಕೂಡ ಏರಿಕೆ ಕಂಡಿವೆ. ಇದನ್ನೂ ಓದಿ: ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 13 ಮಂದಿ ದುರ್ಮರಣ

