ಬೆಳಗಾವಿ: ಪ್ರೀತಿ (love) ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ(Belagavi) ನಡೆದಿದೆ.
ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕುಟುಂಬ ಕಂಗಾಲಾಗಿದೆ. ಅದೆ ಗ್ರಾಮದಲ್ಲಿ ಯುವತಿ ತಾಯಿ ಜೊತೆ ವಾಸವಿದ್ದಾಳೆ. ಯುವತಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿತ್ಯ ಕಾಲೇಜಿಗೆ ಹೋಗುವಾ ಫಾಲೋ ಮಾಡಿ ರೇಗಿಸುತ್ತಿದ್ದ.

ತಿಪ್ಪಣನ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಈ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕಾಲೇಜಿಗೆ ಹೋಗುವುದನ್ನೇ ಬಿಟ್ಟಿದ್ದಾಳೆ. ಮದುವೆ ಆಗೆಂದು ಕಳೆದ ಮೂರು ವರ್ಷಗಳಿಂದ ಪೀಡಿಸುತ್ತಿದ್ದಾನೆ. ಮದುವೆ ಮಾಡಿಕೊಡದಿದ್ದರೆ ಹತ್ಯೆ ಮಾಡುವುದಾಗಿ ಯುವತಿ ಹಾಗೂ ತಾಯಿಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಬಾತ್ ರೂಮ್ನಲ್ಲಿ ಯುವತಿ ಶವ ಪತ್ತೆ ಪ್ರಕರಣ: ಕೈ ಕೋಯ್ದು ಕೊಲೆಗೈದ ಅಪ್ರಾಪ್ತ ಬಾಲಕ
ಕೆಲ ತಿಂಗಳ ಹಿಂದೆ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನು. ಯಾವುದೇ ಕೆಲಸ ಮಾಡದೇ ಕುಡಿದು ಊರಲ್ಲಿ ಸುತ್ತಾಡುವ ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆಗ ಪೊಲೀಸರ ವಾರ್ನ್‍ಗೆ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಯುವತಿಯ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ . ಇದನ್ನೂ ಓದಿ: ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ
ಸದ್ಯ ಕುಟುಂಬ ಮತ್ತೆ ರಕ್ಷಣೆ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಇದೀಗ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಕ್ಷಣೆಗಾಗಿ ಯುವತಿ ಮನೆಗೆ ಓರ್ವ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು

