ಬೆಂಗಳೂರು: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಲರಣಕ್ಕೆ ಸಂಬಂಧಿಸಿದಂತೆ ವೈಕಕ್ತಿಕ ಕಾರಣಕ್ಕೆ ಕೊಲೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಮಹಾನಿರ್ದೇಶಕ ಅಲೋಕ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಬೇಕಾಗಿಯೇ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿದೆ: ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ
ಚುನಾವಣಾ ಸಮಯದಲ್ಲಿ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯಸ್ಥೆ ಕಾಪಾಡುತ್ತೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್ ದರ್ಬಾರ್ : ಸಿಟಿ ರವಿ