By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶ-ವಿದೇಶಗಳ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಸು ಫ್ರಮ್‌ ಸೋʼ ಚಿತ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಸ್ಯಾಂಡಲ್​ವುಡ್-Sandalwood - ದೇಶ-ವಿದೇಶಗಳ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಸು ಫ್ರಮ್‌ ಸೋʼ ಚಿತ್ರ

ಸ್ಯಾಂಡಲ್​ವುಡ್-SandalwoodEntertainment

ದೇಶ-ವಿದೇಶಗಳ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಸು ಫ್ರಮ್‌ ಸೋʼ ಚಿತ್ರ

‘Su From So’: How an unheralded Kannada film broke marketing norms

Published July 29, 2025
Share
2 Min Read
Su From So Su From So Su From So
SHARE

ಬೆಂಗಳೂರು: ರಾಜ್‌ ಬಿ. ಶೆಟ್ಟಿ, ಶಶಿಧರ್‌ ಶೆಟ್ಟಿ, ರವಿ ರೈ ನಿರ್ಮಾಣದ, ಜೆ.ಪಿ. ತುಮಿನಾಡ್‌ ನಿರ್ದೇಶನದ ಚೊಚ್ಚಲ ಕನ್ನಡ ಚಿತ್ರ ʼಸು ಫ್ರಮ್‌ ಸೋʼ ಸದ್ಯ ಟಾಕ್‌ ಆಫ್‌ ಟೌನ್‌ ಆಗಿದೆ. ಸಿದ್ಧಸೂತ್ರಗಳನ್ನೆಲ್ಲ ಗಾಳಿಗೆ ತೂರಿ ಸ್ಯಾಂಡಲ್‌ವುಡ್‌ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದ ಈ ಚಿತ್ರ ಇದೀಗ ಪರ ಭಾಷೆ, ಪರ ರಾಜ್ಯದ ಜತೆಗೆ ವಿದೇಶಕ್ಕೂ ತನ್ನ ಜೈತ್ರಯಾತ್ರೆ ವಿಸ್ತರಿಸಿದೆ. ಹೌದು, ಈ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ವಿದೇಶದಿಂದಲೂ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ಚಿತ್ರತಂಡ ವಿದೇಶದಲ್ಲಿಯೂ ರಿಲೀಸ್‌ ಮಾಡುವುದಾಗಿ ಘೋಷಿಸಿದೆ.

ಯಾವುದೇ ಸ್ಟಾರ್‌ಗಳಿಲ್ಲದೆ, ಅಬ್ಬರದ ಪ್ರಚಾರವಲ್ಲದೆ, ಕಡಿಮೆ ಬಜೆಟ್‌ನಲ್ಲಿ ತಯಾರಾದ ʼಸು ಫ್ರಮ್‌ ಸೋʼ ವೀಕೆಂಡ್‌ ಮಾತ್ರದ ವಾರದ ದಿನಗಳಲ್ಲಿಯೂ ಉತ್ತಮ ಕಲೆಕ್ಷನ್‌ ಮಾಡುತ್ತಿದೆ. ಈಗಾಗಲೇ 10 ಕೋಟಿ ರೂ.ಗಿಂತ ಅಧಿಕ ದೋಚಿಕೊಂಡಿರುವ ಸಿನಿಮಾ ವಿದೇಶದಲ್ಲಿಯೂ ಮೋಡಿ ಮಾಡಲು ಮುಂದಾಗಿದೆ.

ಜರ್ಮನಿ, ಇಂಗ್ಲೆಂಡ್‌, ಗಲ್ಫ್‌ನಲ್ಲಿಯೂ ಸಿನಿಮಾ ತೆರೆಗೆ ಬರಲಿದೆ. ಜರ್ಮನಿಯಲ್ಲಿ ಆಗಸ್ಟ್‌ 1ರಿಂದ ಪ್ರದರ್ಶನ ಕಾಣಲಿದ್ದು, ರಾಜ್‌ ಬಿ. ಶೆಟ್ಟಿ ಈಗಾಗಲೇ ಥಿಯೇಟರ್‌ ಲಿಸ್ಟ್‌ ಹಂಚಿಕೊಂಡಿದ್ದಾರೆ. ಜರ್ಮನಿಯ ಬರೋಬ್ಬರಿ 17 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವುದು ಚಿತ್ರದ ಜನಪ್ರಿಯತೆಗೆ ಸಾಕ್ಷಿ. ಇಂಗೆಂಡ್‌ನಲ್ಲಿ ಯಾವಾಗ, ಎಲ್ಲಿ ರಿಲೀಸ್‌ ಆಗಲಿದೆ ಎನ್ನುವ ವಿವರ ಇನ್ನೂ ಹೊರಬಿದ್ದಿಲ್ಲ.

ʼಸು ಫ್ರಮ್‌ ಸೋʼ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವುದರಿಂದ ಪರಭಾಷಿಕರೂ ಆಕರ್ಷಿತರಾಗಿದ್ದಾರೆ. ಮಲಯಾಳಂ ಆವೃತ್ತಿ ಆಗಸ್ಟ್‌ 1ರಂದು ತೆರೆಗೆ ಬರಲಿದ್ದು, ಹಿಂದಿಗೂ ಡಬ್‌ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ ಚಿತ್ರದ ತೆಲುಗು ಡಬ್ಬಿಂಗ್ ಹಕ್ಕಿಗೆ ಬೇಡಿಕೆ ಬಂದಿದೆ. ಕೆಲವು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಈ ಚಿತ್ರದ ಡಬ್ಬಿಂಗ್ ಹಕ್ಕಿಗೆ ಬೇಡಿಕೆ ಇಟ್ಟಿವೆ ಎನ್ನಲಾಗಿದೆ. ಜತೆಗೆ ತಮಿಳಿನ ಕೆಲ ಸಂಸ್ಥೆಗಳು ಸಿನಿಮಾದ ರಿಮೇಕ್ ಹಕ್ಕಿಗೆ ಮುಂದೆ ಬಂದಿವೆಯಂತೆ.

ʼಸು ಫ್ರಮ್‌ ಸೋʼ ಎಂದರೆ ಸುಲೋಚನಾ ಫ್ರಮ್‌ ಸೋಮೇಶ್ವರ. ಕರಾವಳಿಯ ಹಳ್ಳಿಯೊಂದರಲ್ಲಿ ನಡೆಯುವ ಘಟನೆಯನ್ನು ಬಹಳ ನೈಜವಾಗಿ ಜೆ.ಪಿ. ತುಮಿನಾಡ್‌ ತೆರೆಮೇಲೆ ತಂದಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಜೆ.ಪಿ. ತುಮಿನಾಡ್ ಜತೆಗೆ ರಾಜ್‌ ಬಿ. ಶೆಟ್ಟಿ, ಪ್ರಕಾಶ್ ತುಮಿನಾಡ್, ಶನೀಲ್ ಗೌತಮ್‌, ದೀಪಕ್ ರೈ ಪಾಣಾಜೆ, ಮೈಮ್ ರಾಮದಾಸ್, ಸಂಧ್ಯಾ ಅರೆಕರೆ ಸೇರಿದಂತೆ ಬಹುತೇಕ ಕರಾವಳಿ ಕಲಾವಿದರೇ ಮುಖ್ಯ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

You Might Also Like

‘ರೆಬೆಲ್ ಸ್ಟಾರ್’ ಅಂಬರೀಶ್ ಅಗಲಿ ಇಂದಿಗೆ 7 ವರ್ಷ

‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

ಸ್ಕೂಬಾ ಡೈವಿಂಗ್ ವೇಳೆ ಅಪಘಾತವಾಗಿ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,

TAGGED:Su From So
Share This Article
Facebook Copy Link Print
Previous Article Dharmasthala 2 Dharmasthala 2 Dharmasthala 2 ಧರ್ಮಸ್ಥಳ ಪ್ರಕರಣ : ಜೆಸಿಬಿಗಳನ್ನು ಬಳಸಿ ಹೂತಿಟ್ಟ ಶವಗಳಿಗಾಗಿ ಶೋಧ
Next Article Darshan And Ramya Darshan And Ramya Darshan And Ramya ದರ್ಶನ್ ಅಭಿಮಾನಿಗಳ ವಿರುದ್ಧ ಸಮರ ಸಾರಿದ ನಟಿ ರಮ್ಯಾ, ಬೆಂಬಲಕ್ಕೆ ನಿಂತ ದೊಡ್ಮನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up