ಉಡುಪಿ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇತ ದೋಸ್ತಿ ಅಭ್ಯರ್ಥಿಯಾಗಿ ಹೆಚ್.ಡಿ. ಕುಮಾರಸ್ವಾಮಿ (HDKumaraswamy ) ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು (Chandru) ಕಣದಲ್ಲಿದ್ದಾರೆ.

ಇನ್ನು ಮಂಡ್ಯ ಕ್ಷೇತ್ರದಲ್ಲಿ ನಡ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ (Sumalatha Ambaresh) ಅವರೇ ದರ್ಶನ್ ಅವರು ಪ್ರಚಾರಕ್ಕೆ ಕಳುಹಿಸಿದ್ದಾರೆ ಎಂದು ಮಾತುಗಳು ಬರುತ್ತಿವೆ. ಇದೀಗ ಇದಕ್ಕೆ ಸುಮಲತಾ ಅವರು ಸ್ಪಷ್ಟನೆ ನೀಡಿದ್ದಾರೆ . ಇದನ್ನೂ ಓದಿ: ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಮ್‌ರ ಹಲ್ಲೆ
ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಸುಮಲತಾ ಅಂಬರೀಶ್, ಸುಮಲತಾ ಅವರೇ ದರ್ಶನ್ ಅವರನ್ನು ಪ್ರಗಾರಕ್ಕೆ ಕಳುಹಿಸಿದ್ದಾರೆ ಎನ್ನುವುದು ಉಹಾಪೋಹ, ಇದರಲ್ಲಿ ಸೆನ್ಸ್ ಲಾಜಿಕ್ ಎರಡು ಇಲ್ಲ. ದರ್ಶನ್ ಅವರನ್ನ ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ಪ್ರತಿದಿನ ಚರ್ಚೆ ಮಾಡಲ್ಲ ಎಂದು ಸ್ಟಷ್ಟನೇ ನೀಡಿದ್ದಾರೆ. ಇದನ್ನೂ ಓದಿ: ಬಾತ್ ರೂಮ್‌ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯುರಿಟಿ ಗಾರ್ಡ್- ಕಂಬಕ್ಕೆ ಕಟ್ಟಿ ಥಳಿಸಿದ ಜನರು