ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Corporation) ಅವ್ಯವಹಾರ ಆರೋಪ ಹಾಗೂ ನಿಗಮದ ಅಧೀಕ್ಷಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಬ್ಯಾಂಕ್ ಉದ್ಯೋಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್ ಅವರ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ
ಏನಿದು ಪ್ರಕರಣ?
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಡೆತ್ನೋಟ್ನಲ್ಲಿ ಅಧೀಕ್ಷಕ ಉಲ್ಲೇಖಿಸಿದ್ದರು. ಇದನ್ನೂ ಓದಿ: ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು
ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ 6 ಪುಟಗಳ ಡೆತ್ನೋಟ್ ಇದೀಗ ಸಂಚಲನ ಮೂಡಿಸಿದೆ. ಡೆತ್ನೋಟ್ನಲ್ಲಿ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ನಿಗಮದಲ್ಲಿ ಅವ್ಯವಹಾರ ಆಗಿದೆ ಎಂದು ಉಲ್ಲೇಖಿಸಿದ್ದಾರೆ. ಇಲಾಖೆಯ ಖಾತೆಯ ಹಣವನ್ನು ನಿಗಮದ ಅಧಿಕಾರಿಗಳು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ಬರೆದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ಕ್ಯಾನ್ಸಲ್ ಆಗಲಿದೆ – ಪರಮೇಶ್ವರ್
ಡೆತ್ನೋಟ್ನಲ್ಲಿ ಪ್ರಸ್ತಾಪಿಸಿರುವ ಅಧಿಕಾರಿಗಳೇ ಅಕ್ರಮ ಎಸಗಿದ್ದಾರೆ. ಇದೇ ಕಾರಣಕ್ಕೆ ನೇಣಿಗೆ ಶರಣಾಗುತ್ತಿರುವೆ. ನಿಗಮಕ್ಕೆ ಸಂಬಂಧಿಸಿದ 187 ಕೋಟಿ ರೂ. ಅವ್ಯವಹಾರಕ್ಕೆ ಕಾರಣರಾದವರ ಹೆಸರನ್ನು ಡೆತ್ನೋಟ್ನಲ್ಲಿ ಬರೆದಿರುವುದಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ