ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಸಲ್ಲಿಸಿದ್ದ ಜಮೀನು (Bail) ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರದಲ್ಲಿ (Holenarasipura) ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು. ಇದನ್ನೂ ಓದಿ: ದಾಸನಿಗೆ ಜೈಲು ಉಟದಿಂದ ಫುಡ್ ಪಾಯಿಸನ್ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ
27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್‌ಐಆರ್

