ಹಾಸನ : ಆಲೂರು ಪಟ್ಟಣದ ಹಳೆಯ ಆಲೂರಿನ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಮನೆಯಲ್ಲಿದ್ದ ದಂಪತಿ ಹಾಗೂ ಮಗು ತೀವ್ರವಾಗಿ ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ.
ನೆಯ ಮಾಲೀಕ ಮೋಹನ್ ಅವರ ಪುತ್ರ ಸುದರ್ಶನ್ ಆಚಾರ್ (40), ಪತ್ನಿ ಕಾವ್ಯ (28) ಹಾಗೂ ಅವರ ಚಿಕ್ಕ ಮಗು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಸ್ಫೋಟದ ಮೂಲ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಡುಗೆ ಅನಿಲ ಸೋರಿಕೆ ಅಥವಾ ಬೇರೆ ಯಾವುದೇ ತಾಂತ್ರಿಕ ಕಾರಣವೇನೆಂಬುದರ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.

