By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರು ಅರಮನೆ ಆವರಣದಲ್ಲಿ ಅನುಮಾನಾಸ್ಪದವಾಗಿ ಹೀಲಿಯಂ ಸಿಲಿಂಡರ್ ಸ್ಫೋಟ, : ಎನ್‌ಐಎ ಅಧಿಕಾರಿಗಳಿಂದ ಪರಿಶೀಲನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮೈಸೂರು ಅರಮನೆ ಆವರಣದಲ್ಲಿ ಅನುಮಾನಾಸ್ಪದವಾಗಿ ಹೀಲಿಯಂ ಸಿಲಿಂಡರ್ ಸ್ಫೋಟ, : ಎನ್‌ಐಎ ಅಧಿಕಾರಿಗಳಿಂದ ಪರಿಶೀಲನೆ
ರಾಜ್ಯ-KarnatakaLatest

ಮೈಸೂರು ಅರಮನೆ ಆವರಣದಲ್ಲಿ ಅನುಮಾನಾಸ್ಪದವಾಗಿ ಹೀಲಿಯಂ ಸಿಲಿಂಡರ್ ಸ್ಫೋಟ, : ಎನ್‌ಐಎ ಅಧಿಕಾರಿಗಳಿಂದ ಪರಿಶೀಲನೆ

Suspicious explosion in Mysore Palace premises: NIA officials inspect

Published December 26, 2025
Share
2 Min Read
SHARE

ಮೈಸೂರು, ಡಿ.26: ಮೈಸೂರು ಅರಮನೆ ಆವರಣದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (Helium Cylinder Blast) ಇದೀಗ ರಾಷ್ಟ್ರೀಯ ತನಿಖಾ ದಳ (NIA) ಎಂಟ್ರಿಯಾಗಿದೆ. ಇಂದು ಎನ್‌ಐಎ ಅಧಿಕಾರಿಗಳು ಮೈಸೂರಿಗೆ ಆಗಮಿಸಿ, ಸ್ಫೋಟ ನಡೆದ ಸ್ಥಳವನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿಗಳಿಂದ ತನಿಖಾ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ಸಾಮಾನ್ಯವಾಗಿ ಹೀಲಿಯಂ ಜಡ ಅನಿಲವಾಗಿದ್ದು ಸ್ಫೋಟಗೊಳ್ಳುವುದಿಲ್ಲ. ಆದರೆ ಅರಮನೆಯಂತಹ ಭದ್ರತಾ ಪ್ರದೇಶದಲ್ಲೇ ಸಿಲಿಂಡರ್ ಸ್ಫೋಟಗೊಂಡಿರುವುದರಿಂದ ಹಲವು ಅನುಮಾನಗಳು ಮೂಡಿವೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ಸಲೀಂ (40) ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರಗೊಂಡಿದೆ.

ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾ ಮೂಲದವನು ಎನ್ನಲಾಗಿತ್ತು. ಆದರೆ ನಂತರದ ತನಿಖೆಯಲ್ಲಿ ಆತ ಉತ್ತರ ಪ್ರದೇಶ ಮೂಲದವನು ಎಂಬುದು ದೃಢಪಟ್ಟಿದೆ. ಸಹೋದರರೊಂದಿಗೆ ಉತ್ತರ ಪ್ರದೇಶದಿಂದ ಮೈಸೂರಿಗೆ ಬಂದಿದ್ದ ಸಲೀಂ, ಕಳೆದ 15 ದಿನಗಳಿಂದ ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ವಾಸವಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಹೀಲಿಯಂಗೆ ಬೇರೆ ಅನಿಲ ಮಿಶ್ರಣ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ ಸಲೀಂ ಸುಮಾರು ಒಂದು ತಿಂಗಳ ಹಿಂದೆ ಮೈಸೂರಿಗೆ ಬಂದಿದ್ದ. ಇಂತಹ ಸಂದರ್ಭದಲ್ಲೇ ಹೀಲಿಯಂ ಸಿಲಿಂಡರ್ ಸುಲಭವಾಗಿ ದೊರೆತದ್ದು ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ನಿನ್ನೆ ರಾತ್ರಿ ಸುಮಾರು 8.30ರ ವೇಳೆಗೆ ಸಲೀಂ ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರಾಟ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟವಾಗಿದೆ. ಪ್ರತ್ಯಕ್ಷದರ್ಶಿ ಅರಮನೆ ಗೈಡ್ ನೀಡಿದ ಮಾಹಿತಿ ಪ್ರಕಾರ, ಸಲೀಂ ಸಾಮಾನ್ಯವಾಗಿ ಅರಮನೆ ಮುಂಭಾಗದಲ್ಲಿ ನಿಂತು ಬಲೂನ್ ಮಾರಾಟ ಮಾಡುತ್ತಿರಲಿಲ್ಲ. ಆತ ಅಲ್ಲಿಗೆ ಬಂದ ತಕ್ಷಣವೇ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಗುರುವಾರ (ಡಿ.25) ಈ ಸ್ಥಳದಲ್ಲಿ ಬಲೂನ್ ಮಾರಾಟ ಮಾಡಿರಲಿಲ್ಲ ಎಂಬ ಅಂಶವೂ ಅನುಮಾನಕ್ಕೆ ಕಾರಣವಾಗಿದೆ.

ಸಿಲಿಂಡರ್ ಸ್ಫೋಟ ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕವೇ? ಸದಾ ಕಾಣಿಸಿಕೊಳ್ಳದ ವ್ಯಕ್ತಿ ರಾತ್ರಿ ವೇಳೆ ಅರಮನೆ ಮುಂಭಾಗಕ್ಕೆ ಬಂದದ್ದು ಯಾಕೆ? ಎಂಬ ಹಲವು ಪ್ರಶ್ನೆಗಳೊಂದಿಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಸಾಮಾನ್ಯವಾಗಿ ಅರಮನೆ ಸುತ್ತಮುತ್ತ ವಸ್ತು ಮಾರಾಟ ಮಾಡುವವರು ಮೈಸೂರಿನ ಸ್ಥಳೀಯರೇ ಆಗಿರುತ್ತಾರೆ. ಆದರೆ ಉತ್ತರ ಪ್ರದೇಶ ಮೂಲದ ಸಲೀಂ ಹಿನ್ನೆಲೆ, ಮೈಸೂರಿಗೆ ಬಂದ ಸಮಯ, ಎಷ್ಟು ವರ್ಷಗಳಿಂದ ಬಲೂನ್ ಮಾರಾಟ ಮಾಡುತ್ತಿದ್ದ, ಅರಮನೆ ಮುಂಭಾಗದಲ್ಲಿ ನಿರಂತರವಾಗಿ ಮಾರಾಟ ಮಾಡುತ್ತಿದ್ದನೇ ಅಥವಾ ಇತ್ತೀಚೆಗೆ ಮಾತ್ರ ಬಂದನೇ ಎಂಬ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸಲೀಂ ಜೊತೆಗೆ ವಾಸವಾಗಿದ್ದ ಇಬ್ಬರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಉತ್ತರ ಪ್ರದೇಶದಿಂದ ಬಂದ ಮೂವರು ಪ್ರತಿದಿನ ಒಟ್ಟಾಗಿ ಬಲೂನ್ ಮಾರಾಟಕ್ಕೆ ತೆರಳುತ್ತಿದ್ದರು. ಆದರೆ ನಿನ್ನೆ ಸಲೀಂ ಒಬ್ಬನೇ ಬಲೂನ್ ಮಾರಾಟಕ್ಕೆ ಹೋಗಿದ್ದ, ಉಳಿದ ಇಬ್ಬರು ರೂಮ್‌ನಲ್ಲೇ ಇದ್ದರು ಎನ್ನಲಾಗಿದೆ. ಲಾಡ್ಜ್ ಮುಂಭಾಗದಲ್ಲಿ ಎರಡು ಸೈಕಲ್‌ಗಳು ಪತ್ತೆಯಾಗಿವೆ.

ಇದಲ್ಲದೆ, ಸಲೀಂ ಅರಮನೆಯೊಳಗೆ ಪ್ರವೇಶಿಸಿದ್ದ ಫೋಟೋಗಳು ಲಭ್ಯವಾಗಿವೆ. ಆತ ಯಾವಾಗ ಅರಮನೆಯೊಳಗೆ ಹೋಗಿದ್ದ? ಕೇವಲ ಬಲೂನ್ ಮಾರಾಟಗಾರನಾಗಿದ್ದನೇ ಅಥವಾ ಬೇರೆ ಕೆಲಸದಲ್ಲೂ ತೊಡಗಿದ್ದನೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.

You Might Also Like

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

ಖ್ಯಾತ ತಬಲ ವಾದಕ ಉಸ್ತಾದ್ ಜಾಕೀರ್​ ಹುಸೇನ್​ ಇನ್ನಿಲ್ಲ..!

ಭಾರತದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಏಕೈಕ ಗುರಿ: ಮೋದಿ

ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

TAGGED:MysuruSuspicious Explosion
Share This Article
Facebook Copy Link Print
Previous Article ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು
Next Article ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿದ ಬಾಲಿವುಡ್‌ ನಟಿಯರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up