ಕಲಬುರಗಿ: ತೀವ್ರ ಹೃದಯಾಘಾತದಿಂದ (Heart Attack) ವಿರಕ್ತ ಮಠದ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ.
ಸಿದ್ದರಾಮ ಮಹಾಸ್ವಾಮಿಗಳು (35). ಕಲಬುರಗಿ ಜಿಲ್ಲೆ(Kalaburgi) ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮುಂದಿನ 6 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ
ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಇದನ್ನೂ ಓದಿ: 100 ಗ್ರಾಮ್ ನುಗ್ಗೆ ಸೊಪ್ಪು ಎಷ್ಟೆಲ್ಲಾ ಕೆಲಸ ಮಾಡುತ್ತೆ ಗೊತ್ತಾ?