ಕೆಂಡಸಂಪಿಗೆ, ಕನಕ , ಚೌಕ ಮತ್ತು ಟಗರು ಮೂಲಕ ಪ್ರಖ್ಯಾತ ಪಡೆದ ಟಗರು ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ಮದುವೆ ಇಂದು ಚಿಕ್ಕಮಗಳೂರಿನ ಕಳಸದಲ್ಲಿ (Kalasa) ನೆರವೇರಿದೆ. ಮೈಸೂರಿನ ಹುಡುಗ ಅರುಣ್ ಕುಮಾರ್ (Arun Kumar) ಜೊತೆ ಇಂದು ಹೊಸ ಜೀವನಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಎರಡು ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ ಅಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ನಿನ್ನೆ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತ್ತು.ಇದನ್ನೂ ಓದಿ:ರಾಷ್ಟ್ರ ರಾಜಧಾನಿಯಲ್ಲಿ “ಕೈ” ಗೆ ಮತ್ತೊಂದು ಶಾಕ್: ಮತ್ತಿಬ್ಬರು ಇಂದು ರಾಜೀನಾಮೆ

ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು. ಇದನ್ನೂ ಓದಿ: ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ