ಆಂಧ್ರಪ್ರದೇಶ : ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ.
ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಶಿಕ್ಷಕ ಜಯರಾಜು ಬೆದರಿಕೆ ಹಾಕಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಮೂರು ತಿಂಗಳಿನಿಂದ ಬಾಲಕಿಗೆ ಮುಟ್ಟು ಬಂದಿರಲಿಲ್ಲ.
ಗಮನಿಸಿದ ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿತು. ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟಿದ್ದು, ಕುಟುಂಬವು ಪೊಲೀಸರನ್ನು ಸಂಪರ್ಕಿಸಿತ್ತು.
ರಾಯವರಂ ಪೊಲೀಸ್ ಠಾಣೆಯಲ್ಲಿ (ಪೋಕ್ಸೊ) ಕಾಯ್ದೆಯಡಿಯಲ್ಲಿ ಔಪಚಾರಿಕ ದೂರು ದಾಖಲಾಗಿದೆ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

