ದುಬೈ : ವಿಶ್ವದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾದ ‘ದುಬೈ ಏರ್ ಶೋ’ನಲ್ಲಿ ಭಾರತದ ತೇಜಸ್ ಲಘು ಯುದ್ಧ ವಿಮಾನ(Tejas fighter jet) ಪ್ರದರ್ಶನ ನೀಡುತ್ತಿದ್ದ ವೇಳೆ ಪತನಗೊಂಡಿದೆ.
ದುಬೈನ ಅಲ್ ಮಕ್ತುಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಸ್ಥಳೀಯ ಕಾಲಮಾನ ಮಧ್ಯಾಹ್ನ 2:10ಕ್ಕೆ ಈ ದುರಂತ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದೆ ಎನ್ನಲಾಗಿದೆ.
ವಿಮಾನದಲ್ಲಿದ್ದ ಪೈಲಟ್ ಅವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಅವರು ಸುರಕ್ಷಿತವಾಗಿ ಹೊರಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಗಾಗಿ ನಿರೀಕ್ಷಿಸಲಾಗಿದೆ ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.
ದುಬೈ ಏರ್ ಶೋನಲ್ಲಿ ಪ್ರದರ್ಶನದ ವೇಳೆ, ಸ್ಥಳೀಯ ಕಾಲಮಾನ ಮಧ್ಯಾಹ್ನ 2:10 ರ ಸುಮಾರಿಗೆ ಬೆಂಗಳೂರಿನ ಎಚ್‌ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಇನ್ನು ಪತನದ ನಂತರ ವಿಮಾನದ ಸುತ್ತ ಕಪ್ಪು ಹೊಗೆ ಆವರಿಸಿಕೊಂಡಿದ್ದು, ಪೈಲಟ್ ಸಾವಿಗೀಡಾಗಿದ್ದಾರ ಇಲ್ಲಾ ಪೈಲಟ್ ಹೊರಬರುವಲ್ಲಿ ಯಶಸ್ವಿಯಾದರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.
ಸುದ್ದಿ ಸಂಸ್ಥೆ ಎಪಿ ವರದಿಯ ಪ್ರಕಾರ, ಇಂದು ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುಬೈ ವಾಯು ಪ್ರದರ್ಶನದಲ್ಲಿ, ತೇಜಸ್ ಯುದ್ಧ ವಿಮಾನವು ಜನಸಮೂಹದ ಮುಂದೆ ಪ್ರದರ್ಶನ ನೀಡುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ. HAL ತಯಾರಿಸಿದ ಈ ತೇಜಸ್ ವಿಮಾನವು ಭಾರತೀಯ ವಾಯುಪಡೆಗೆ ಬಹುಮುಖ್ಯವಾದ ಸ್ವದೇಶಿ ಯುದ್ಧವಿಮಾನವಾಗಿದ್ದ ಕಾರಣದಿಂದ ಘಟನೆಯು ಆತಂಕ ಸೃಷ್ಟಿಸಿದೆ.

