ಬೆಂಗಳೂರು: ಬಿಸಿಲಿನ ಮಧ್ಯೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುದ್ದಾರೆ. ಇದೇ ವೇಳೆ ಮತ್ತೊಂದು ಶಾಕಿಂಗ್ ವಿಚಾರವೆನೆಂದರೆ ನಾಳೆಯಿಂದ ತಾಪಮಾನ ಇನ್ನು ಹೆಚ್ಚಾಗಲಿದೆ.
ಏಪ್ರಿಲ್ 25 ರಂದ ಮಂದಿನ 5 ದಿನಗಳವರೆಗೆ ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಾಗುವ ಸಾಧ್ಯೆತೆಯಿದೆ. ನಾಳೇ ದೇಶದ 13 ರಾಜ್ಯಗಳು 89 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲ್ಲಿದೆ. ನಾಳೆ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆ 2024: 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ; ಕ್ಷೇತ್ರಗಳ ವಿವಿರ
ಏಪ್ರಿಲ್ 25 ರಿಂದ 29 ರವರೆಗೆ ಬಿಸಿಗಾಳಿ, ಕರ್ನಾಟಕದ ಒಳನಾಡಿನ ಜೆಲ್ಲೆಗಳಲ್ಲಿ ತೀವ್ರ ಬಿಸಿಗಾಳಿ ಹೆಚ್ಚಾಗಿರುವ ಸಾಧ್ಯೆತೆ ಇದೆ. ಕರಾವಳಿಯಲ್ಲಿ ಬಿಸಿ ಮತ್ತು ವಾತಾವರಣವು ಹೆಚ್ಚಾಗಿರುವ ಸಾದ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೇ ಮಾಡಲಾಗಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೆಡ್ ಅಲರ್ಟ ಎಚ್ಚರಿಕೆ ನೀಡಲಾಗಿದೆ. ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಕೊಂದ ಮಗ
ನಾಳೆ ಕೇರಳ, ರ‍್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ ಇರುವ ಮುನ್ಸೂಚನೆ ನೀಡಲಾಗಿದೆ. ಕೇರಳ ರಾಜ್ಯದಲ್ಲಿ 36-40 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆ ಇದೆ. ಚುನಾವಣಾ ಆಯೋಗವು ಬಿಸಿ ಗಾಳಿ ಸಮಸ್ಯೆ ಎದುರಿಸಲು ಟಾಸ್ಕ್ ಪೋರ್ಸ್ ರಚಿಸಿದೆ. ಪೋಲಿಂಗ್ ಬೂತ್‌ಗಳಲ್ಲಿ ಕುಡಿಯುವ ನೀರು, ಫ್ಯಾನ್‌ಗಳ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ. ಇದನ್ನೂ ಓದಿ: ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್