ಪಾಕಿಸ್ತಾನ/ಬಲೂಚಿಸ್ತಾನ್: ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್‌ನ (Gwdar) ವಸತಿ ಕ್ವಾರ್ಟರ್ಸ್ನಲ್ಲಿ ಗುರುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು (Gunmen) ಗುಂಡು ಹಾರಿಸಿ ಏಳು ಕಾರ್ಮಿಕರನ್ನು(Workers) ಹತ್ಯೆ ಮಾಡಿದ್ದಾರೆ. ಕಾರ್ಮಿಕರು ಸುರಬಂದರ್‌ನ ಕ್ಷೌರಿಕ ಅಂಗಡಿಯಲ್ಲಿ ಕೆಲಸ ಮಾಡುವವರು.
ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ (Pakistan) ಭಯೋತ್ವಾದಕ ದಾಳಿ ಹೆಚ್ಚಾಗುತ್ತಿದೆ. ಗ್ವಾದರ್‌ನ ಸರಬಂದ್‌ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್ಗಳ ಮೇಲೆ ಭಯೋತ್ಪಾದಕರು ಮಲಗಿದ್ದ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಿಂದ ಏಳು ಮಂದಿ ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾನೆ. ಇದನ್ನೂ ಓದಿ:ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ
ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ. ಇದನ್ನೂ ಓದಿ: ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್
ಈ ಹಿಂದೆ ಮಾರ್ಚ್ 20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು . ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ. ಇದಾದ ನಂತರ ಸ್ಥಳದಲ್ಲೇ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ
ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ. ದಾಳಿಯಲ್ಲಿ ಯಾವುದೇ ಸ್ಥಳೀಯರು ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಪ್ರ ತೀಕಾರವಾಗಿ ಏಳು ಮಂದಿ ದಾಳಿಕೋರರನ್ನು ಕೊಲ್ಲಲಾಯಿತು ಮತ್ತು ಇದರ ನಂತರ ಗುಂಡಿನ ದಾಳಿಯನ್ನು ನಿಲ್ಲಿಸಲಾಯಿತು ಎಂದು ಗ್ವಾದರ್ ಹಿರಿಯ ಪೊಲೀಸ್ ಅಧೀಕ್ಷಕ ಜೊಹೈಬ್ ಮೊಹ್ಸಿನ್ ಮಾಧ್ಯಮಗಳಿಗೆ ತಿಳಿಸಿದ್ದರು. ಇದನ್ನೂ ಓದಿ: ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ
ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಸರ್ಫ್ರಾಜ್ ಬುಗ್ತಿ ಅವರು ಗ್ವಾದರ್‌ನಲ್ಲಿ ನಡೆದ ದಾಳಿಯನ್ನು ಖಂಡಿಸಿದರು ಮತ್ತು ಅದನ್ನು ಮುಕ್ತ ಭಯೋತ್ಪಾದನೆ ಎಂದು ಕರೆದಿದ್ದಾರೆ. ದುಷ್ಕರ್ಮಿಗಳನ್ನು ಬಿಡಲಾಗುವುದಿಲ್ಲ ಮತ್ತು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ:ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

