ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ (Delhi Karnataka Bhavan) ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ.
ಎಂ ಬಿ ಅಯ್ಯನಹಳ್ಳಿ ಗ್ರಾಮದ ಮಾರುತಿ(35) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ದೆಹಲಿಯ ಕರ್ನಾಟಕ ಭವನದಲ್ಲಿ ಅಡುಗೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಬಡ್ಡಿ ಹಣಕ್ಕಾಗಿ ವ್ಯಕ್ತಿಯ ಭೀಕರ ಹತ್ಯೆ
ಪತ್ನಿ ಹಾಗೂ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಮಾರುತಿ ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮ ಅಯ್ಯನಹಳ್ಳಿಗೆ ಬಂದಿದ್ದರು.
ಮಂಗಳವಾರ ಸಂಜೆ ಕಾನಾಹೊಸಳ್ಳಿ ಹೊರವಲಯದ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್- ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ
ಸದ್ಯ ಈ ಕುರಿತು ಪತ್ನಿ ದೂರು ನೀಡಿದ್ದು, ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ.

