ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗ್ಯೂ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಲು ಸಿಎಂ ಸೂಚನೆ ನೀಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಪ್ರತ್ಯೇಕ ಜೆಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ನಿಯಂತ್ರಣದ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೋಂವಾರ ಆರೋಗ್ಯ ಸಚಿವ ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ರೈತರಿಂದ ಹಾಲು ತಗೋಬೇಕು ಅಲ್ವಾ, ನಾವು ಬೇಡ ಅನ್ನೋಕಾಗಲ್ಲ
ರಾಜಧಾನಿ ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲದ ಹಿನ್ನಲೆ ಆ ಭಾಗಗಳಲ್ಲಿ ಆದಷ್ಟೂ ಮುನ್ನೆಚ್ಚರಿಕೆ ವಹಿಸುವಂತೆ ಆದೇಶಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ರಣಕೇಕೆ ಹಾಕುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯತೆ ಬಗ್ಗೆ ಪರೀಶಿಲಿಸಲು ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳ ನೆರವಿನಿಂದ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸುವಂತೆ ಮತ್ತು ಪ್ರತಿ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶದ ವಿಶೇಷ ಅಭಿಯಾನ ಮಾಡುವಂತೆ ಸೂಚನೆ ನೀಡಿದ್ದಾರೆ.
ಜೊತೆಗೆ ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲುವಂತೆ ಸಹ ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ – ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ