ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನೇ (Headmaster) ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ (Rape) ಮಾಡಿರುವ ಘಟನೆ ಸಂಬಂಧ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 13 ವರ್ಷದ ವಿದ್ಯಾರ್ಥಿನಿಯನ್ನು (Student) ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಆಕೆಯನ್ನು ಕಳೆದ ಒಂದು ವರ್ಷದಿಂದ ತನ್ನ ಕಾಮತೃಷೆಗೆ ಮುಖ್ಯಶಿಕ್ಷಕ ಬಳಸಿಕೊಂಡಿದ್ದಾನೆ ಎಂದು ದೂರು ನೀಡಲಾಗಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 3 ತಿಂಗಳ ಗರ್ಭಿಣಿ ಎಂದು ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ನಂತರ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಪ್ತ ಸಮಾಲೋಚನೆ ಮಾಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

