ವಿಜಯನಗರ : ಬೆಂಗಳೂರಿನಲ್ಲಿ ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸುಗಳ ಕೆಚ್ಚಲು ಕೊಯ್ದಿರುವುದು ತಪ್ಪು. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ತಿಳಿಸಿದರು.
ಇನ್ನು ಈ ಘಟನೆ ಸಂಬಂಧ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಘಟನೆ ಕುರಿತು ಈಗಾಗ್ಲೇ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. ಯಾರು ಅಂತ ಪತ್ತೆಹಚ್ಚಲು ಕಮಿಷನರಿಗೆ ತಿಳಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದು ಅವರು ತಿಳಿಸಿದರು.
ಯಾರು ತಪ್ಪು ಮಾಡಿದ್ದಾರೋ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲೇಬೇಕು. ಯಾರು ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ. ಅದಕ್ಕೆ ಹಿಂದೂ ಸಂಘಟನೆಗಳು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಆ ರೀತಿ ಮಾಡಬಾರದು. ತಪ್ಪಿತಸರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
ಚಾಮರಾಜಪೇಟೆಯ ವಿನಾಯಕ ನಗರದ ಪೆನ್ಷನ್ ಮೊಲಾದಲ್ಲಿ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ. ಇನ್ನು ಈ ಸಂಬಂಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಪತ್ತೆ ಮಾಡಿ ಬಂಧಿಸಬೇಕೆಂದು ಪಟ್ಟು ಹಿಡಿದಿವೆ. ಇನ್ನು ಈ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಸುಗಳ ಕೆಚ್ಚಲು ಕೊಯ್ದದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.