ರಾಯಚೂರು: ಹುನಮನ ಪುಜೆಂದು ಕೃಷ್ಣಾ (Krishna River) ನದಿಯಿಂದ ನೀರು ತರಲು ಹೊರಟಿದ್ದವರ ಮೆಲೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮುವರು ಮೃತಪಟ್ಟಿರುವ (Died) ಘಟನೆ ತಾಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಗ್ರಾಮದ ಅಯ್ಯನಗೌಡ (28), ಮಹೇಶ್(24), ಮತ್ತು ಉದಯ್ ಕುಮಾರ್(28) ಘಟನೆಯಲ್ಲಿ ಮೃತ ದುರ್ದೈವಿಗಳು. ಭೂಷನ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜೆಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಯ ಕಾರು ಹರಿದು ಮಗು ದುರ್ಮರಣ
ಇಂದು ಹುನಮ ಜಯಂತಿ ಪ್ರಯುಕ್ತ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ
ಪೋಲಿಸರು ಬೊಲೆರೊ ವಾಹನವನ್ನು ಜಪ್ತಿ ಮಾಡಿದ್ದಾರೆ, ಶಕ್ತಿ ನಗರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 24 ಗಂಟೆಯೊಳಗೆ ತೈವಾನ್‌ನಲ್ಲಿ 80 ಕ್ಕೂ ಹೆಚ್ಚು ಬಾರಿ ಕಂಪಿಸಿದ ಭೂಮಿ