ನೆಲಮಂಗಲ: ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಹಸುಗಳ ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇಮ್ರಾನ್, ಸೈಯದ್ ನವಾಜ್, ಬಂಧಿತರು. ಮತ್ತೋರ್ವ ಆರೋಪಿಯ ಹೆಸರು ಬಹಿಂಗಪಡಿಸಿಲ್ಲ. ಆರೋಪಿಗಳು ಇತ್ತೀಚೆಗೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆ ಮೇಲೆ 2 ನಾಟಿ ಹಸುಗಳ ಕತ್ತು ಕೊಯ್ದು ಬಿಸಾಡಿದ್ದರು. ಈ ಪ್ರಕರಣದ ಬಗ್ಗೆ ಸದನದಲ್ಲೂ ಚರ್ಚೆ ಆಗಿತ್ತು.
ಈ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಕೇರಳಕ್ಕೆ ಹಸುಗಳನ್ನ ಸಾಗಿಸುತ್ತಿದ್ದ ಗ್ಯಾಂಗ್‍ನ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಹತ್ಯೆಯಾದ ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲದ ಕಾರಣ ಆರೋಪಿಗಳು ಕೊಂದು ಬಿಸಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
- ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
- ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
- ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
- ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

