ಬೆಳಗಾವಿ: ಎರಡೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಈ ಐವರು ಕಾರಿನಲ್ಲಿ ಗೋಕಾಕದಿಂದ ಹಿರೇಬಾಗೇವಾಡಿ ಕಡೆಗೆ ಬರುತ್ತಿದ್ದರು. ಆಗ ಎದುರಿಗೆ ಎರಡು ಕಾರುಗಳು ಬರುತ್ತಿದ್ದವು. ಒಂದು ಕಾರು ಇನ್ನೊಂದನ್ನು ಹಿಂದಿಕ್ಕುವ ಭರದಲ್ಲಿ ಮೃತರ ಕಾರಿಗೆ ನೇರವಾಗಿ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ಕಾರಿನಲ್ಲಿ ಸವದತ್ತಿ ಪರಸಗಡ ಕ್ಷೇತ್ರದ ಮಾಜಿ ಶಾಸಕ ಆರ್.ವಿ. ಪಾಟೀಲ ಅವರ ಕಾರು ಎಂದು ಬರೆದ ಪತ್ರ ಸಿಕ್ಕಿದೆ. ಇದರಲ್ಲಿದ್ದ ಮಾಜಿ ಶಾಸಕರ ಪುತ್ರ ಹಾಗೂ ಇನ್ನೊಬ್ಬ ಸವಾರನಿಗೂ ಗಾಯಗಳಾಗಿವೆ.
ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರ್ತಿದ್ದ ಆಲ್ಟೊ ಕಾರಿಗೆ ಕಿಯಾ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಆಲ್ಟೊ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

