ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿದಿರುವ ಘಟನೆ ನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ(ಸೆ17) ರಾಣಿ ಚನ್ನಮ್ಮವೃತ್ತದಲ್ಲಿ ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಯುವಕರ ಮಧ್ಯೆ ದಾಂಧಲೆ ಆಗಿದ್ದು, ಮೂವರು … Continue reading ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ