By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ

ರಾಜ್ಯ-KarnatakaLatest

ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ

To avoid property fraud, make sure to create an e-Khata: DKSH.

Published June 29, 2025
Share
4 Min Read
E KLhata. E KLhata. E KLhata.
SHARE

ಬೆಂಗಳೂರು, ಜೂ.29: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ-ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು.

“ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ಕೇವಲ ಮತಕ್ಕೆ ರಾಜಕಾರಣ ಮಾಡಿದವರಲ್ಲ. ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದು ಹೇಳಿದರು.

“ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೆವು. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರೂ.ಗೆ ಖಾತಾ ದಾಖಲೆ ನೀಡಿದ್ದೇವೆ” ಎಂದರು.

“ನಿಮ್ಮ ಆಸ್ತಿಗಳ ದಾಖಲೆ ಸರಿಪಡಿಸಲು ಪಾಲಿಕೆ ವ್ಯಾಪ್ತಿಯಲ್ಲಿ ನಿಮ್ಮ ಆಸ್ತಿ ದಾಖಲೆ ಸ್ಕ್ಯಾನ್ ಮಾಡಿಸಲಾಗಿದೆ. ನಿಮ್ಮ ಕ್ಷೇತ್ರದಲ್ಲಿ ಇಂದು ಯಾರೂ ಲಂಚ ನೀಡದೇ, ನಿಮ್ಮ ಆಸ್ತಿ ಖಾತಾ ದಾಖಲೆ ನೀಡಬೇಕು ಎಂಬುದು ನನ್ನ ಆಲೋಚನೆ. ನನ್ನ ಈ ಕನಸಿನ ಯೋಜನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಬಲವಾಗಿ ನಿಂತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ವಿಜಯನಗರ ಜಿಲ್ಲೆಯಲ್ಲಿ ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಆಮೂಲಕ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ” ಎಂದರು.

“ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲೀಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಈ ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್ ಲೋಡ್ ಮಾಡಿ ಇ ಖಾತಾ ಮಾಡುತ್ತಾರೆ” ಎಂದು ವಿವರಿಸಿದರು.

“ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಪೈಕಿ 5 ಲಕ್ಷ ಆಸ್ತಿ ದಾಖಲೆಗಳನ್ನು ಈ ರೀತಿ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ” ಎಂದರು.

“ಜುಲೈ 1ರಿಂದ ಒಂದು ತಿಂಗಳ ಕಾಲ ಇ-ಖಾತಾ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ನೀವುಗಳು ಭಾಗವಹಿಸಿ ನಿಮ್ಮ ಆಸ್ತಿ ಇ-ಖಾತೆ ಮಾಡಿಸಿಕೊಳ್ಳಿ ವಂಚನೆಯಿಂದ ತಪ್ಪಿಸಿಕೊಳ್ಳಿ. ನಂತರ ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತೇವೆ. ನಿಮಗೆ ನಮ್ಮ ಅಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ” ಎಂದು ಹೇಳಿದರು.

“ಈ ಸರ್ಕಾರ ಬೆಂಗಳೂರಿನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಹಾಗೂ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಈ ಪೈಕಿ ಪಿಆರ್ ಆರ್ ರಸ್ತೆ ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗಲಿದೆ” ಎಂದು ಹೇಳಿದರು.

“ಇನ್ನು ಮುಂದೆ ನೀವು ಮನೆ ಕಟ್ಟುವಾಗ ಕಟ್ಟಡ ನಕ್ಷೆ ಅನುಮತಿ ಕಚೇರಿ ಅಲೆಯುವಂತಿಲ್ಲ. ನಂಬಿಕೆ ನಕ್ಷೆ ಯೋಜನೆ ಮೂಲಕ 50×80 ವಿಸ್ತೀರ್ಣವರೆಗಿನ ನಿವೇಶನವರೆಗೂ ಕಟ್ಟಡ ನಕ್ಷೆಯನ್ನು ನೋಂದಾಯಿತ ಎಂಜಿನಿಯರ್‌ಗಳ ಮೂಲಕ ಒಂದೇ ದಿನದಲ್ಲಿ ಅನುಮತಿ ಪಡೆಯಬಹುದು. ಈ ಯೋಜನೆ ಮೂಲಕ ನಾವು ಈವರೆಗೂ 9 ಸಾವಿರ ಕಟ್ಟಡ ನಕ್ಷೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರಿಗೆ ಒನ್ ಟೈಮ್ ಸೆಟ್ಟಲ್ಮೆಂಟ್ ಯೋಜನೆ ಮೂಲಕ ಒಂದು ಅವಕಾಶ ನೀಡಲಾಗಿತ್ತು” ಎಂದು ಹೇಳಿದರು.

“ಈ ಕ್ಷೇತ್ರದಲ್ಲಿ ಅಗತ್ಯ ಮೇಲ್ಸೇತುವೆ, ರಸ್ತೆ ಅಭಿವೃದ್ಧಿಗೆ ನೂರಾರು ಕೋಟಿ ಮೊತ್ತದ ಯೋಜನೆ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರಿನ ಕೊಳಚೆ ನೀರು ಕಾಲುವೆಗಳ ತಡೆಗೋಡೆ ಎತ್ತರಿಸಲು 2 ಸಾವಿರ ಕೋಟಿ ಅನುದಾನ ತಂದಿದ್ದಾರೆ” ಎಂದರು.

“ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ತೀರ್ಪು ನೀಡಿದ್ದು, ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಿದರೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಆದೇಶ ಹೊರಡಿಸಿದೆ. ಈಗಾಗಲೇ ಮನೆ ಕಟ್ಟಿರುವ ಸಾರ್ವಜನಿಕರಿಗೆ ನಾವು ಹೇಗೆ ಸಹಾಯ ಮಾಡಬಹುದು ಎಂದು ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುತ್ತಿದೆ” ಎಂದು ಭರವಸೆ ನೀಡಿದರು.

You Might Also Like

64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ

ಮತ್ತೊಂದು ಸ್ಫೋಟಕ ರಾಜಕೀಯ ಭವಿಷ್ಯ ಹೇಳಿದ ಕೋಡಿ ಶ್ರೀಗಳು

ಪ್ರತಿಭಟನಾನಿರತ ವೈದ್ಯರ ಜತೆ ಸಭೆ ಬಳಿಕ ಶೇ.99ರಷ್ಟು ಬೇಡಿಕೆಗಳ ಈಡೇರಿಕೆಗೆ ಸಿಎಂ ಮಮತಾ ಒಪ್ಪಿಗೆ

ಬೆಳಗಾವಿ : ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಕೋಚಿಂಗ್- ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಯಲ್ಲಿ 108 ರ್ಯಾಂಕ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ 19 ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

TAGGED:DK Shivakumare-Khata
Share This Article
Facebook Copy Link Print
Previous Article Bengaluru Auto ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ
Next Article Heart Attack Heart Attack Heart Attack Video : ಕ್ರಿಕೆಟ್ ಆಡುತ್ತಲೇ ಪ್ರಾಣಬಿಟ್ಟ ಯುವಕ, ಹೃದಯಾಘಾತ ವಿಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up