ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಿರುದ್ಧ ಬೃಹತ್ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ(Karnataka Rakshana Vedike) ಸಜ್ಜಾಗಿದ್ದು, ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ.
ಇಂದು ಸರೋಜಿನಿ ಮಹಿಷಿ ವರದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಾರಾಯಣ ಗೌಡ (Narayana Gowda) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು, ಅತ್ತ ಜಿಲ್ಲಾ ಕೇಂದ್ರಗಳಲ್ಲೂ ಕರವೇಯಿಂದ ಪ್ರತಿಭಟನೆ ಬಿಸಿ ಮುಟ್ಟಿದ್ದು, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಗಳ ಮುಂದೆ ಪ್ರತಿಭಟನೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಕರವೇ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಲಿದ್ದಾರೆ.
ಪ್ರಮುಖ ಬೇಡಿಕೆಗಳು
1. ಬಲಿಷ್ಠ ಕಾನೂನೂ ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡ್ಬೇಕು
2. ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆ 100%ಕನ್ನಡಿಗರಿಗೆ ಮೀಸಲಿಡಬೇಕು
3. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ 80%ಕನ್ನಡಿಗರಿಗೆ ಮೀಸಲಿಡಬೇಕು
4. 15 ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು ,ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದ್ರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು
5. ನಿಯಮ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡ್ಬೇಕು,
ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನ ವಾಪಾಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕ್ಬೇಕು
6 .ರಾಜ್ಯ ಸರ್ಕಾರಿ ಸಂಸ್ಥೆ ಮತ್ತುಸಾರ್ವಜನಿಕ ವಲಯದಲ್ಲಿ 100%ಕನ್ನಡಿಗರಿಗೆ ಮೀಸಲಾತಿ
7. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ 100%ಕನ್ನಡಿಗರಿಗೆ
8.ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ,ಡಿ ಹೊರತಾದ ಉಳಿದ ಉದ್ಯೋಗದಲ್ಲಿ 90%ಮೀಸಲಾತಿ
9 .ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಂಶವನ್ನ ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು
10. ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡ್ಬೇಕು

