TOP-10 News
1.ಬೆಳಗಾವಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾಧ್ಯಮಗೋಷ್ಟಿ
ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ 50 ವರ್ಷದ ಕರ್ನಾಟಕದ ಇತಿಹಾಸದಲ್ಲಿ ಸಚಿವರೇ ಹನಿಟ್ರ್ಯಾಪ್ ಬಗ್ಗೆ ಆರೋಪಿಸಿದ್ದಾರೆ. ಹಗರಣಗಳು, ಅಧಿಕಾರಿಗಳ ಆತ್ಮಹತ್ಯೆ, ಬೆಲೆ ಏರಿಕೆಯನ್ನು ಮಾಡಿ ಜನಸಾಮಾನ್ಯರು ಬದುಕನ್ನು ಸರ್ಕಾರ ಇಟ್ಟಕ್ಕಿಗೆ ಸಿಲುಕಿಸಿದೆ. ಜನರು ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದಾರೆ. ದೇಶದಲ್ಲೇ ಯುದ್ಧ ಬೇಡವೆಂದ ಸಿಎಂ ಎಂದರೇ ಸಿದ್ಧರಾಮಯ್ಯ. ಅನ್ಯ ಧರ್ಮೀಯರ ವಿರುದ್ಧ ನಮ್ಮ ದ್ವೇಷವಿಲ್ಲ. ಆದರೇ, ನಮ್ಮ ಸೈನಿಕರು ದೇಶಕ್ಕಾಗಿ ಹೋರಾಡುವಾಗ ನಾವೆಲ್ಲ ಒಂದು ಎಂಬ ಭಾವನೆ ಸರ್ಕಾರಕ್ಕಿಲ ಎನ್ನುವ ಹೇಳಿಕೆಯನ್ನು ಕೊಟ್ಟಿದ್ದಾರ
2.ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಪಾಸಾದ ಕಾರು ಜಸ್ಟ್ ಮಿಸ್
ಇಂದು ಮುಂಜಾನೆ ಸುರಿದ ಭಾರೀ ಗಾಳಿ ಮಳೆಗೆ ತಿಪಟೂರು ನಗರದ ಅರಸೀಕೆರೆ ಹೆದ್ದಾರಿಯ ರಸ್ತೆಗೆ ಅಡ್ಡಲಾಗಿ ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಕಾರು ಪಾಸಾಗಿ ದೊಡ್ಡ ಅನಾಹುತ ತಪ್ಪಿದೆ. ಇದರಿಂದ ಸ್ವಲ್ಪ ಸಮಯಗಳ ಕಾಲ ವಾಹನಗಳು ಓಡಾಡಲು ಸಮಸ್ಯೆ ಎದುರಾಯಿತು ನಂತರ ತಿಳಿದ ಅಧಿಕಾರಿಗಳು ತೆರವುಗೊಳಿಸುವ ಪ್ರಯತ್ನ ಮಾಡಿದ್ದಾರೆ. ಇನ್ನು ತಿಪಟೂರಿನ ನಗರದ ರಸ್ತೆಯ ಪಕ್ಕದಲ್ಲಿರುವ ಮರಗಳು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು. ವಾಹನ ಸವಾರರು ಅಪಾಯದಂಚಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ.
3.ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕರ್ತವ್ಯದಿಂದ ಅಮಾನತು ಹಿನ್ನೆಲೆ
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕರ್ತವ್ಯದಿಂದ ಅಮಾನತು ಆದ ಹಿನ್ನೆಲೆ ಹಿಂದುಪರ ಸಂಘಟನೆಗಳು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಹಾಗೇನೇ ಸಿಪಿಐ ಅಮಾನತು ಆದೇಶ ವಾಪಸ್ ಪಡೆಯಲು ಆಗ್ರಹಿಸಿದರು
4.ಮಳೆ ಅವಾಂತರ ಉಡಾಫೆ ಉತ್ತರ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ
ಬೆಂಗಳೂರಿನಲ್ಲಿ ಸುರಿದ ಮಹಾ ಮಳೆಗೆ ಸಾಲು ಸಾಲು ಅನಾಹುತಗಳು ಸಂಭವಿಸಿದೆ. ಒಂದೆಡೆ ಮನೆಗಳಿಗೆ ನೀರು ನುಗ್ಗಿದ್ದರೆ, ಮತ್ತೊಂದಡೆ ವಾಹನಗಳು ನೀರಿನಲ್ಲಿ ತೇಲಾಡಿವೆ. ಇದರಿಂದ ಜನರು ಪರದಾಡುತ್ತಿದ್ದಾರೆ. ಪ್ರತಿ ಬಾರಿಯೂ ಭಾರಿ ಮಳೆಯಾದಗ ಇದೇ ಸ್ಥಿತಿ ನಿರ್ಮಾಣವಾಗುತ್ತಿದ್ದು, ಬಿಬಿಎಂಪಿ ಇದನ್ನು ಪರಿಹರಿಸುತ್ತಿಲ್ಲ ಎಂದು ಜನರು ಗೋಳಾಡುತ್ತಿದ್ದಾರೆ. ಆದ್ರೆ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಳೆ ಆಗುವಾಗ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ ಎಂದು ಉಡಾಫೆ ಮಾತುಗಳನ್ನಾಡಿದ್ದಾರೆ
5.ಸರ್ಕಾರಗಳು ಸಾಧನಾ ಸಮಾವೇಶ ಮಾಡೋದು ಹೊಸತೇನಲ್ಲ
ಸರ್ಕಾರಗಳು ಸಾಧನಾ ಸಮಾವೇಶ ಮಾಡೋದು ಹೊಸತೇನಲ್ಲ, ಅದರೆ ಸಿದ್ದರಾಮಯ್ಯ ಸರ್ಕಾರ ಯಾವ ಸಾಧನೆ ಮಾಡಿದೆ ಅಂತ ಅದನ್ನು ಮಾಡುತ್ತಿದೆ ಹೆಲಿಕಾಪ್ಟರ್ ನಲ್ಲಿ ತಿರುಗಾಡೋದನ್ನು ಬಿಟ್ಟು ಸಿದ್ದರಾಮಯ್ಯ ಮಾಡಿದ್ದಾದರೂ ಏನು? ರಾಜ್ಯದ ಮಾತು ಹಾಗಿರಲಿ, ತಮ್ಮ ತವರು ಜಿಲ್ಲೆ ಮೈಸೂರಿಗೆ ಏನು ಮಾಡಿದ್ದಾರೆ? ಮೈಸೂರಿಗ್ಯಾಕೆ ಇವರು ಚಾಪರ್ನಲ್ಲಿ ಬರ್ತಾರೆ? ಎಂದು ಬಿಜೆಪಿ ಎಮ್ಮೆಲ್ಸಿ ಹೆಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ
6.ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯಕ್ಕೆ ಚಾರಣ
ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್ ಅಡ್ವೆಂಚರ್ ಫೌಂಡೇಷನ್ ಪೌರಕಾರ್ಮಿಕ ಮಕ್ಕಳು ಹಾಗೂ ಮಾವುತರ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ದಿದೆ. ಮೈಸೂರಿನ ಎಂಟು ಪೌರಕಾರ್ಮಿಕರ ಮಕ್ಕಳು, ಮಾವುತರು, ಅರಣ್ಯ ರಕ್ಷಕರು ಮತ್ತು ಇತರ ನಾಗರಿಕರ ತಂಡವು ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ ಹತ್ತುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
7.ಈ ಸಮಸ್ಯೆ ಹೊಸದಲ್ಲ, ನಿಮ್ಮೊಂದಿಗೆ ನಿಲ್ಲುತ್ತೇನೆ; ಡಿಕೆ.ಶಿವಕುಮಾರ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿದ್ದು, ಸಾರ್ವಜನಿಕರು ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಈ ನಡುವಲ್ಲೇ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ.ಶಿವಕುಮಾರ್ ಅವರು, ನಿಮ್ಮಲ್ಲಿ ನಾನೂ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆಂದು ಹೇಳಿದ್ದಾರೆ.
8.Bamul ನಿರ್ದೇಶಕರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವಿರೋಧ ಆಯ್ಕೆ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರದಿಂದ ಬಮುಲ್ ನಿರ್ದೇಶಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಬಮುಲ್ ನಿರ್ದೇಶಕ ಸ್ಥಾನಕ್ಕೆ ಡಿಕೆ.ಸುರೇಶ್ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದರು. ಇತರರ ಆಕಾಂಕ್ಷಿಗಳು ಸಲ್ಲಿಸಿದ ನಾಮಪತ್ರಗಳು ಅಮಾನ್ಯವಾಗಿದ್ದ ಹಿನ್ನೆಲೆಯಲ್ಲಿ ಸುರೇಶ್ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
9.ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೌನ ‘ಶಾಪ’ ಎಂದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿರುವ ಅವರು, ಆ ಸಮಯದಲ್ಲಿ ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆಯ ಬಗ್ಗೆ ಮಾತ್ರ ಮೌನವಾಗಿರುವುದು ‘ಶಾಪ’ ಎಂದು ಹೇಳಿದ್ದಾರೆ.
10.ಜಲಾಶಯದಲ್ಲಿ ಬೆಂಗಳೂರಿನ ಮೂವರು ಯುವತಿಯರು ಜಲಸಮಾಧಿ
ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ನಲ್ಲಿ ನಡೆದಿದೆ. ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಬೆಂಗಳೂರು ಮೂಲದ ರಾಘವಿ(18) ಮಧುಮಿತ(20), ಹಾಗೂ ರಮ್ಯಾ(22) ಎನ್ನುವರು ಮೃತಪಟ್ಟಿದ್ದಾರೆ.ಜಲಾಶಯ ವೀಕ್ಷಣೆಗೆಂದು ತೆರಳಿದ್ದ ಏಳು ಯುವತಿಯರು ಹೋಗಿದ್ದರು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎಲ್ಲರೂ ನೀರಿಗೆ ಬಿದ್ದಿದ್ದು, ಇದರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ.

