ರೈಲು ಹಳಿ ಮೇಲೆ ಸಿಲಿಂಡರ್‌ ಇಟ್ಟು ಅಪಘಾತ ನಡೆಸಲು ದುಷ್ಕರ್ಮಿಗಳ ಸಂಚು, ತಪ್ಪಿದ ಅನಾಹುತ

ಲಕ್ನೋ: ಪ್ರಯಾಗ್​ರಾಜ್​ ಮಾರ್ಗವಾಗಿ ತೆರಳುತ್ತಿದ್ದ ಕಾಳಿಂದಿ ಎಕ್ಸ್​ಪ್ರೆಸ್​​​ ರೈಲು ತೆರಳುವ ಹಳಿಗಳ ಮೇಲೆ ದುಷ್ಕರ್ಮಿಗಳು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಇಟ್ಟು ರೈಲು ಅಪಘಾತ ನಡೆಸಲು ಸಂಚು ರೂಪಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ 8:25ರ ವೇಳೆ ಕಾನ್ಪುರದಿಂದ ಭಿವಾನಿಗೆ ಪ್ರಯಾಣಿಸುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್‌ ಹಳಿ ಮೇಲಿದ್ದ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಲೋಕೋ ಪೈಲಟ್‌ ಇದನ್ನು ಗಮನಿಸಿ ತಕ್ಷಣ ತುರ್ತು ಬ್ರೇಕ್​ ಹಾಕಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಲಿಂಡರ್ ದೂರಕ್ಕೆ ಚಿಮ್ಮಿ ಸ್ಫೋಟಗೊಂಡಿದೆ. ಅದೃಷ್ಟವಶಾತ್​​ ಸಂಭಾವ್ಯ ಅನಾಹುತ ತಪ್ಪಿದೆ. … Continue reading ರೈಲು ಹಳಿ ಮೇಲೆ ಸಿಲಿಂಡರ್‌ ಇಟ್ಟು ಅಪಘಾತ ನಡೆಸಲು ದುಷ್ಕರ್ಮಿಗಳ ಸಂಚು, ತಪ್ಪಿದ ಅನಾಹುತ