ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಬಗ್ಗೆ ಟ್ರಂಪ್‌ಗೆ ಬೇಸರವಿದೆ, ಅದೇ ಕಾರಣಕ್ಕೆ ಭಾರತಕ್ಕೆ ಶೇ.50ರಷ್ಟು ಸುಂಕ ವಿಧಿಸಿದ್ದಾರೆ. ಈ ಎಲ್ಲಾ ಭಿನ್ನಾಭಿಪ್ರಾಯಗಳ ನಡುವೆ ಎಲ್ಲವನ್ನೂ ಮರೆತು ಟ್ರಂಪ್ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾರೆ.
ಮೋದಿ ಕೂಡ ಈ ಮಾಹಿತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಅಧ್ಯಕ್ಷ ಟ್ರಂಪ್‌ಗೆ ಧನ್ಯವಾದ ಹೇಳುತ್ತಾ, ನಿಮ್ಮ ಕರೆ ಮತ್ತು ಹುಟ್ಟುಹಬ್ಬದ ಶುಭಾಶಯಗಳಿಗೆ ಧನ್ಯವಾದಗಳು. ನಿಮ್ಮಂತೆಯೇ, ಭಾರತ-ಯುಎಸ್‌ಎ ನಡುವಿನ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಪ್ರಯತ್ನಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಬರೆದಿದ್ದಾರೆ.
ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಪ್ರಧಾನಿ ಮತ್ತು ಕನಿಷ್ಠ ಎರಡು ಪೂರ್ಣ ಅವಧಿಗಳನ್ನು ಪೂರ್ಣಗೊಳಿಸಿದ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಭಾರತ ಮಾತ್ರವಲ್ಲದೇ ವಿಶ್ವ ಮೆಚ್ಚಿದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಖ್ಯಾತಿ ಗಳಿಸಿದ್ದಾರೆ.

