By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ

ವಿದೇಶ-InternationalLatest

ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ

Trump warns of 'big problems' if China ships weapons to Iran

Published April 12, 2026
Share
2 Min Read
trump vs xi jinping
SHARE

ವಾಷಿಂಗ್ಟನ್, ಏಪ್ರಿಲ್ 12: ಜಾಗತಿಕ ರಾಜಕೀಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದ್ದು, ಅಮೆರಿಕ, ಇರಾನ್ ಮತ್ತು ಚೀನಾ ನಡುವಿನ ಸಂಘರ್ಷ ಗಂಭೀರ ತಿರುವು ಪಡೆದುಕೊಂಡಿದೆ. ಇರಾನ್‌ಗೆ ಚೀನಾ ನೀಡುತ್ತಿರುವ ಬೆಂಬಲದ ಹಿನ್ನೆಲೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ನೇರ ಸಂದೇಶ ರವಾನಿಸಿರುವ ಟ್ರಂಪ್, “ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಬೇಡಿ. ಇಲ್ಲವಾದರೆ ಊಹಿಸಲಾರದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕವೇ ಮೇಲುಗೈ ಸಾಧಿಸಲಿದೆ ಎಂದು ಅವರು ಘೋಷಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೆಲಬಾಂಬ್‌ಗಳನ್ನು ಅಳವಡಿಸುವ ಮೂಲಕ ಜಾಗತಿಕ ತೈಲ ಸಾಗಣೆಗೆ ಅಡ್ಡಿಪಡಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕ್ರಮವನ್ನು ತಡೆಯಲು ಅಮೆರಿಕ ತೀರ್ಮಾನಿಸಿರುವುದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಅಮೆರಿಕದ ಯುದ್ಧ ವಿಮಾನಗಳ ಚಲನೆ ಕುರಿತು ಗುಪ್ತ ಮಾಹಿತಿಯನ್ನು ಚೀನಾ ಇರಾನ್‌ಗೆ ಒದಗಿಸುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರ ಪರಿಣಾಮವಾಗಿ, ಇರಾನ್ ಅಮೆರಿಕದ ಯುದ್ಧ ವಿಮಾನಗಳ ಮೇಲೆ ದಾಳಿ ನಡೆಸಲು ಸಾಧ್ಯವಾಗುತ್ತಿದೆ ಎಂದು ಅಮೆರಿಕ ವಲಯಗಳು ಹೇಳಿವೆ.

ಮುಂದಿನ ವಾರ ಚೀನಾ ಇರಾನ್‌ಗೆ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸುವ ಸಾಧ್ಯತೆ ಇದೆ. ಈಗಾಗಲೇ ಭುಜದ ಮೇಲೆ ಹೊತ್ತೊಯ್ಯುವ MANPADS ಕ್ಷಿಪಣಿಗಳ ನೆರವಿನಿಂದ ಇರಾನ್, ಅಮೆರಿಕದ ಎಫ್-15 ಇ ಯುದ್ಧ ವಿಮಾನ ಹಾಗೂ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಕಳೆದ ಎರಡು ದಶಕಗಳಲ್ಲಿ ಅಮೆರಿಕದ ಯುದ್ಧ ವಿಮಾನಗಳಿಗೆ ನೇರ ಸವಾಲು ಎತ್ತಲು ಯಾರಿಗೂ ಸಾಧ್ಯವಾಗಿರಲಿಲ್ಲ. ಆದರೆ ಚೀನಾದ ತಂತ್ರಜ್ಞಾನ ಬೆಂಬಲದಿಂದ ಇರಾನ್ ಇದೀಗ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ ಎಂದು ವಿಶ್ಲೇಷಣೆಗಳು ಸೂಚಿಸುತ್ತಿವೆ. ಮಾರ್ಚ್ 2026ರಲ್ಲಿ ಚೀನಾ, ರಾಕೆಟ್ ಇಂಧನಕ್ಕೆ ಬಳಸುವ ಸೋಡಿಯಂ ಪರ್ಕ್ಲೋರೇಟ್ ಅನ್ನು ಎರಡು ಹಡಗುಗಳ ಮೂಲಕ ಇರಾನ್‌ಗೆ ಕಳುಹಿಸಿರುವುದು ಪತ್ತೆಯಾಗಿದೆ.

ಈ ಬೆಳವಣಿಗೆಗಳ ನಡುವೆಯೇ, ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ ಅದರ ಹೊಣೆಯನ್ನು ಇರಾನ್ ಮತ್ತು ಚೀನಾ ಹೊರುತ್ತವೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಒಂದು ಕಡೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದರೆ, ಇನ್ನೊಂದು ಕಡೆ ಯುದ್ಧ ಸನ್ನದ್ಧತೆ ಜೋರಾಗಿದೆ.

ಚೀನಾ ಮತ್ತು ಅಮೆರಿಕ ನಡುವಿನ ನೇರ ಮುಖಾಮುಖಿಯ ಭೀತಿ ಜಾಗತಿಕ ಶಾಂತಿಗೆ ದೊಡ್ಡ ಸವಾಲಾಗಿದ್ದು, ಇರಾನ್-ಅಮೆರಿಕ ಸಂಘರ್ಷ ಈಗ ಮಹಾಶಕ್ತಿಗಳ ನಡುವಿನ ತೀವ್ರ ಪೈಪೋಟಿಯಾಗಿ ಮಾರ್ಪಟ್ಟಿದೆ.

You Might Also Like

SSLC ವಿದ್ಯಾರ್ಥಿನಿ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ – ಇನ್ನೂ ಪತ್ತೆಯಾಗದ ರುಂಡ

ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ, ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ

Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌

ರೇಣುಕಾ ಸ್ವಾಮಿ ಕೊಲೆಯಾದಾಗ ಶೆಡ್ನಲ್ಲಿ ದರ್ಶನ್ ಇರಲೇ ಇಲ್ಲ..? 

ರಾಯರ ಭಕ್ತರಿಗೆ ಮೋಸ, ಆನ್​​ಲೈನ್​​ ಬುಕ್ಕಿಂಗ್ ನಲ್ಲಿ ವಂಚನೆ

TAGGED:ChinaDonald Trump
Share This Article
Facebook Copy Link Print
Previous Article HD Kumaraswamy HD Kumaraswamy HD Kumaraswamy ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ
Next Article Shrinanda Srinanda Shrinanda Srinanda Shrinanda Srinanda ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up