ರಾಯಚೂರು: ಲಿಂಗಸುಗೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಮೂಲಗಳ ತಿಳಿವಳಿಕೆಯಂತೆ, ಬೈಕ್ ಸವಾರರ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿದೆ.
ಬಸವರಾಜ್ ಮತ್ತು ಅರ್ಬಾಜ್ ಸೇರಿದಂತೆ ನಾಲ್ವರಿಗೆ ಸ್ಥಳೀಯ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರಲ್ಲೊಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

