By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ
BlogLatestರಾಜಕೀಯ | Politics

ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ

'Undeclared emergency in Karnataka': Shobha Karandlaje attacks Congress Government

Published September 19, 2024
Share
4 Min Read
Shobha Karandlaje attacks Congress government
SHARE

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‌ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಸಿಎಂ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ. ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ- ಹೀಗೆ ನಿರಂತರವಾಗಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಅವರ ಧ್ವನಿ ಅಡಗಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಐವನ್ ಡಿಸೋಜ ಅವರು ಹೇಳಿಕೆ ಕೊಟ್ಟಿದ್ದರು. ನಮ್ಮ ಮಂಗಳೂರಿನ ಜನರು, ಕಾರ್ಯಕರ್ತರು ದಿನವೂ ಪೊಲೀಸ್ ಸ್ಟೇಶನ್‍ಗೆ ಹೋಗುತ್ತಿದ್ದಾರೆ. ದೂರನ್ನೂ ನೀಡುತ್ತಿದ್ದಾರೆ. ಆದರೆ, ಇವತ್ತಿನ ತನಕ ದೂರನ್ನು ತೆಗೆದುಕೊಂಡಿಲ್ಲ ಎಂದು ವಿವರಿಸಿದರು. ಅವರ ಮೇಲೆ ಎಫ್‍ಐಆರ್ ದಾಖಲಿಸುತ್ತಿಲ್ಲವೇಕೆ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.

ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು ಪೊಲೀಸ್ ವ್ಯಾನಿನಲ್ಲಿ ಕರೆದುಕೊಂಡು ಹೋಗಿ ವಿಸರ್ಜನೆ ಮಾಡುವ ಘಟನೆ ನಡೆದಿದೆ. ಯಾಕಾಗಿ ಹೀಗಾಗಿದೆ? ನಾಗಮಂಗಲದ ಗಣಪತಿಗೆ ನೀವು ಚಪ್ಪಲಿ ಎಸೆಯಲು ಅವಕಾಶ ಕೊಟ್ಟಿದ್ದೀರಿ. ಕಲ್ಲುಗಳನ್ನೂ ಎಸೆದರು. ಮೂರ್ತಿ ಭಗ್ನ ಆಯಿತು. ಮೂರ್ತಿಯನ್ನು ಅಲ್ಲೇ ಬಿಟ್ಟು ಓಡಿದರು. 25 ಅಂಗಡಿಗಳನ್ನು ಸುಟ್ಟು ಹಾಕಿದರು. ಆ ಜನರು ಯಾರು ಎಂದು ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನೆಯನ್ನು ಮುಂದಿಟ್ಟರು.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್

ನಾಗಮಂಗಲದ ಜನರಿಗೆ ಆ ಧೈರ್ಯ ಹೇಗೆ ಬಂತು? ಲಭಿಸಿದ ವರದಿ ಪ್ರಕಾರ ಕೇರಳದಿಂದ ಬಂದಿದ್ದಾರೆ ಎನ್ನುತ್ತಿದ್ದಾರೆ. ಅವರು ಯಾರು? ಹೇಗೆ ಮತ್ತು ಯಾಕೆ ಬಂದರು? ಇವತ್ತು ನಾಗಮಂಗಲದ ಕೇಸನ್ನೂ ನೀವು ಮುಚ್ಚಿ ಹಾಕಿದ್ದೀರಿ. ನಿಮ್ಮ ಪೊಲೀಸರು ಇದೊಂದು ಘಟನೆಯೇ ಅಲ್ಲ ಎಂಬಂತೆ ಆ ಕೇಸನ್ನು ಕ್ಲೋಸ್ ಮಾಡಿದ್ದಾರೆ ಎಂದು ದೂರಿದರು. ಪರಮೇಶ್ವರ್ ಅವರು ಇದೊಂದು ಚಿಕ್ಕ ಘಟನೆ ಎನ್ನುತ್ತಾರೆ. ಯಾವುದು ಚಿಕ್ಕ ಘಟನೆ ಪರಮೇಶ್ವರ್ ಅವರೇ ಎಂದು ಕೇಳಿದರು. 25 ಅಂಗಡಿ ಸುಟ್ಟದ್ದು ಚಿಕ್ಕ ಘಟನೆಯೇ? ಪಕ್ಕದ ರಾಜ್ಯದಿಂದ ಬಂದು ಗಲಭೆ ಮಾಡಿದ್ದು ಚಿಕ್ಕ ಘಟನೆಯೇ? ಎಂದರು.

ಅತ್ಯಂತ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ಮತ್ತು ಶಾಸಕರ ಪುತ್ರ ಸೇರಿ ತಮಗೆ ಹಣ ಕೇಳಿದ್ದು, ಅದನ್ನು ಕೊಡಲು ನನಗೆ ಶಕ್ತಿ ಇಲ್ಲ; ನನಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿ ಸತ್ತರು. ಅವರ ಮೇಲೆ ಎಫ್‍ಐಆರ್ ದಾಖಲಿಸಲು ಹಿಂದೆ ಮುಂದೆ ನೋಡಿದ್ದೀರಿ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ಮಾಡಿ ಸಿಕ್ಕಿ ಹಾಕಿಕೊಂಡ ಬಳಿಕ ನೀವು ಎಸ್‍ಐಟಿ ರಚಿಸಿದ್ದೀರಿ. ಎಸ್‍ಐಟಿ ವರದಿಯನ್ನು ಓದಿದ್ದೀರಾ ಸಿದ್ದರಾಮಯ್ಯನವರೇ? ಆ ವರದಿಯಲ್ಲಿ ನಾಗೇಂದ್ರ ಅವರ ಹೆಸರು ಯಾಕೆ ಇಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರು ಅಪರಾಧಿ ಅಲ್ಲವೇ? ಎಂದು ಕೇಳಿದರು.

ಬೆಳಗಾವಿಯಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ 3 ಜನ ಹಿಂದೂ ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಕೋಲಾರದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಪ್ಯಾಲೆಸ್ಟೀನ್ ಧ್ವಜ ನೋಡುವಂತಾಗಿದೆ. ಕೋಲಾರದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜದ ಪ್ರದರ್ಶನ ಆಗಿದೆ. ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್‍ನಲ್ಲಿ ರಾಷ್ಟ್ರಧ್ವಜ ವಿರೂಪಗೊಳಿಸಿ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದುವಿನಲ್ಲಿ ಬರೆದಿದ್ದಾರೆ. ಇಂಥ ಧ್ವಜವನ್ನು ಬೆಂಗಳೂರಿನಲ್ಲಿ ಏರಿಸುತ್ತಿದ್ದಾರೆ. ಇದು ಕರ್ನಾಟಕದ ರಾಜಧಾನಿಯ ಸ್ಥಿತಿ ಎಂದು ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.

ಸಮಾಜಘಾತುಕರು, ದೇಶದ್ರೋಹಿಗಳು, ಅಪರಾಧಿಗಳಿಗೆ ಈ ಧೈರ್ಯ ಹೇಗೆ ಬಂದಿದೆ? ನೀವು ಮುಖ್ಯಮಂತ್ರಿ ಆದ ತಕ್ಷಣ ರಾಜ್ಯಸಭೆ ಚುನಾವಣೆ ನಡೆದಿತ್ತು. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ವಿಧಾನಸೌಧದಲ್ಲಿ ಮೊದಲ ಬಾರಿಗೆ ನಾವು ಪಾಕಿಸ್ತಾನ್ ಜಿಂದಾಬಾದ್ ಕೇಳಿದೆವು ಎಂದು ಆತಂಕ ವ್ಯಕ್ತಪಡಿಸಿದರು. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಕೇಸು ಹಾಕುವುದಾಗಿ ಹೇಳಿ ದಿನ ತಳ್ಳಲಾಯಿತು ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಹಿಂದೂಗಳನ್ನು ಕಗ್ಗೊಲೆ ಮಾಡಿದ ಔರಂಗಬೇಬನ ರಕ್ತಸಿಕ್ತ ಖಡ್ಗ ಪ್ರದರ್ಶನ ಮಾಡುತ್ತಾರೆ. ಕೋಲಾರದಲ್ಲೂ ಇದರ ಪ್ರದರ್ಶನ ನಡೆಯುತ್ತದೆ. ಟಿಪ್ಪುವನ್ನು ವೈಭವೀಕರಿಸಲಾಗುತ್ತಿದೆ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹನುಮಾನ್ ಚಾಲೀಸ ಕೇಳುತ್ತಿದ್ದ ಹುಡುಗನ ಮೇಲೆ ಹಲ್ಲೆ ಮಾಡುತ್ತಾರೆ. ಕೇಳಲು ಹೋದ ನಮ್ಮ ಮೇಲೇ ಕೇಸು ಹಾಕಿದ್ದೀರಿ ಎಂದು ಆಕ್ಷೇಪಿಸಿದರು.

ಇವತ್ತು ಅಶೋಕ್ ಮತ್ತು ನಾವು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ. ಇವತ್ತು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದಕ್ಕಾಗಿ ಪ್ರಜಾತಂತ್ರವನ್ನು ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದೀರಿ. ಪ್ರಜಾತಂತ್ರದ ರಕ್ಷಕರು ನೀವು ಎಂದು ವ್ಯಂಗ್ಯವಾಡಿದರು.

ಮೊನ್ನೆ ಭಾನುವಾರ ರಾಜ್ಯಾದ್ಯಂತ ಸಂವಿಧಾನ ರಕ್ಷಣೆ ಮಾಡಬೇಕೆಂದು ಶಾಲೆ- ಕಾಲೇಜು ಮಕ್ಕಳ ಮಾನವ ಸರಪಳಿ ಮಾಡಿದ್ದೀರಿ? ಯಾವ ಪುರುಷಾರ್ಥಕ್ಕೆ? ಜನರು ಬರಲಿಲ್ಲ. ಮನೆಗೆ ಹೋಗಿದ್ದ ಮಕ್ಕಳನ್ನು ಕರೆದುಕೊಂಡು ಬಂದು ರಸ್ತೆ ತುಂಬ ಬಿಸಿಲಲ್ಲಿ ನಿಲ್ಲಿಸಿದ್ದೀರಿ. ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಾರೆ ಎಂದು ನೂರಾರು ಫೋನ್ ಕರೆ ನಮಗೆ ಬಂದಿತ್ತು. ಯಾವ ಸಂವಿಧಾನದ ರಕ್ಷಣೆ ಮಾಡಲು ನೀವು ಹೊರಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

You Might Also Like

ಈ ರಾಜ್ಯದಲ್ಲಿ 11 ಬೂತ್‌ಗಳಲ್ಲಿ ಮರು ಮತದಾನ : ಹಾಗಾದರೇ ಎಲ್ಲಿ, ಯಾವ ರಾಜ್ಯ

ಚಿಕ್ಕೋಡಿಯಲ್ಲೊಬ್ಬ ಕಾಮುಕ ಸ್ವಾಮೀಜಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ

ಬೆಂಗಳೂರಿನ ಬೀದಿನಾಯಿಗಳಿಗೆ ನಿಗದಿತ ಸ್ಥಳದಲ್ಲಿ ಆಹಾರ ನೀಡುವ ಕಾರ್ಯಕ್ಕೆ ಪ್ರಾಯೋಗಿಕವಾಗಿ ಚಾಲನೆ

ಬೆಂಗಳೂರಲ್ಲಿ ಎಚ್‌ಎಂಪಿವಿ ವೈರಸ್‌‍ ಪತ್ತೆ, ಆರೋಗ್ಯ ಇಲಾಖೆ ಹೈಅಲರ್ಟ್, ತುರ್ತು ಸಭೆ

TAGGED:Congress GovernmentShobha Karandlaje
Share This Article
Facebook Copy Link Print
Previous Article Jani Master ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್
Next Article Darshan Mother ಬಳ್ಳಾರಿ ಜೈಲಲ್ಲಿ ಮಗನನ್ನು ನೋಡಿ ಕಣ್ಣೀರಿಟ್ಟ ದರ್ಶನ್ ತಾಯಿ ಮತ್ತು ಅಕ್ಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up