ಮಂತ್ರಾಲಯ: ಮಂತ್ರಾಲಯ ಕ್ಷೇತ್ರದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಾನುವಾರ ಭಕ್ತಿಭಾವದಿಂದ ನಡೆದ ಶ್ರೀ ಗುರುರಾಯರ ವೈಭವೋತ್ಸವದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತವಾಗಿ ಭಾಗವಹಿಸಿದರು.
ವೈಭವೋತ್ಸವದ ಅಂಗವಾಗಿ ನಡೆದ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅವರು ಉಪಸ್ಥಿತರಿದ್ದು, ಶ್ರೀ ಗುರುರಾಯರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ದರ್ಶನದ ಬಳಿಕ ಮಠಾಧೀಶರಾದ ಪರಮಪೂಜ್ಯ ಸುಬುಧೇಂದ್ರ ತೀರ್ಥ ಅವರ ಆಶೀರ್ವಾದವನ್ನು ಕೇಂದ್ರ ಸಚಿವರು ಪಡೆದರು. ಕ್ಷೇತ್ರದ ಆಧ್ಯಾತ್ಮಿಕ ಮಹತ್ವ ಮತ್ತು ಧಾರ್ಮಿಕ ಪರಂಪರೆಯನ್ನು ಅವರು ಕೊಂಡಾಡಿದರು.
ಭಕ್ತರ ಸಂಭ್ರಮ ಹಾಗೂ ಭಕ್ತಿಪೂರ್ಣ ವಾತಾವರಣದಲ್ಲಿ ವೈಭವೋತ್ಸವ ಸಮಾರಂಭ ಯಶಸ್ವಿಯಾಗಿ ನೆರವೇರಿತು.

