By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Latestರಾಜಕೀಯ | Politicsರಾಜ್ಯ-Karnataka

ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Union Minister Kumaraswamy angry over 15 percent increase in bus fares

Published January 3, 2025
Share
2 Min Read
HD Kumaraswamy
SHARE

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಅವರು ಕಿಡಿಕಾರಿದರು.

ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ ಪ್ರಯಾಣ ದರ ಏರಿಕೆಗೇ ಅಡ್ಜೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಇದೇ ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು. ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ. ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿಕೆ ಲೇವಡಿ ಮಾಡಿದರು.

ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲಾ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ ಎಂದು ಅವರು ಟೀಕಿಸಿದರು.

ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್ ಡಿಕೆ ಕಿವಿಮಾತು ಹೇಳಿದರು.

ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಸರಕಾರ. ಈ‌ ಸರಕಾರ ಬಂದ ದಿನದಿಂದ ಇದೇ ನಡೆಯುತ್ತಿದೆ. ಹೀಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ಸಂಕ್ರಾಂತಿ ಕಳೆಯಲಿ, ಆಮೇಲೆ ಈ ಸರಕಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

You Might Also Like

ಇದು ಅಂಗನವಾಡಿ ಕಟ್ಟಡವೋ..? ದನದ ಕೊಟ್ಟಿಗೆಯೋ..?

ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ

ಅಕ್ರಮ ಮನೆ ನಿರ್ಮಾಣ : ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಾಮೀಲು, “ಲೇಡಿ ಟೈಗರ್ “ನಾಗರತ್ನ ಆಟ ಬಯಲು

ನಿಲ್ಲದ ‘ಹೃದಯಾಘಾತ’ ಮರಣ ಮೃದಂಗ, ಸಾವಿಗೆ ಕೋವಿಡ್ ಲಸಿಕೆ ಕಾರಣವೇ?

ಮೃತ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೆನಗೆ ಕಟೀಲ್‌ ಭೇಟಿ

TAGGED:#hd kumaraswamyBus Fare Hike
Share This Article
Facebook Copy Link Print
Previous Article China Vireus Covid ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್
Next Article Rajagopala Chidambaram ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up