ಶಿರಡಿ, ಜ.27: ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಮಹಾರಾಷ್ಟ್ರದ ಶಿರಡಿ ಕ್ಷೇತ್ರಕ್ಕೆ ಭೇಟಿ ನೀಡಿ ಭಗವಾನ್ ಶ್ರೀ ಶಿರಡಿ ಸಾಯಿಬಾಬಾ ಅವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇಶದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ದರ್ಶನದ ನಂತರ ಮಾತನಾಡಿದ ಅವರು, ಶಿರಡಿ ಸಾಯಿಬಾಬಾ ಅವರ ಆಶೀರ್ವಾದದಿಂದ ದೇಶಕ್ಕೆ ಶಾಂತಿ, ಸೌಹಾರ್ದತೆ ಹಾಗೂ ಸಮೃದ್ಧಿ ದೊರಕಲಿ ಎಂದು ಕೋರಿದರು. ಈ ಭೇಟಿಯ ವೇಳೆ ಸ್ಥಳೀಯ ಆಡಳಿತ ಹಾಗೂ ಭಕ್ತರು ಉಪಸ್ಥಿತರಿದ್ದರು.

