ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣರನ್ನು (Suraj Revanna) ಮೆಡಿಕಲ್ ಟೆಸ್ಟ್‌ಗೆ (Medical Test) ಬೌರಿಂಗ್ ಆಸ್ಪತ್ರೆಗೆ ಸಿಐಡಿ (CID) ಪೊಲೀಸರು ಕರೆತಂದಿದ್ದಾರೆ.
ಸದ್ಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್‌ಗೆ 42ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಅವರನ್ನು ಟೆಸ್ಟ್‌ಗೆ ಕರೆತರಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಬುಧವಾರ ಸಹ ಅವರನ್ನ ಮೆಡಿಕಲ್ ಟೆಸ್ಟ್‌ಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ನ್ಯಾಯಾಲಯದ ಅನುಮತಿ ಪಡೆಯದೇ ಸಿಐಡಿ ಪೊಲೀಸರು ಅವರನ್ನು ಕರೆತಂದಿದ್ದ ಹಿನ್ನೆಲೆ ವೈದ್ಯರು ಜನರಲ್ ಚೆಕಪ್ ಮಾಡಿ ಕಳಿಸಿದ್ದರು. ವಿಶೇಷ ಮೆಡಿಕಲ್ ಟೆಸ್ಟ್‌ಗೆ ವೈದ್ಯರು ನಿರಾಕರಿಸಿದ್ದರು. ಇದನ್ನೂ ಓದಿ: 515 ಕೆಂಪೇಗೌಡ ಜಯಂತಿ ಆಚರಿಸಿ ಬಿಬಿಎಂಪಿ
ಏನಿದು ಪ್ರಕರಣ?: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಜೂ.23 ರಂದು ಪೊಲೀಸರು ಬಂಧಿಸಿದ್ದರು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ಅಕ್ರಮ ಬಂಧನ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‍ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ಇದಾದ ಬಳಿಕ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಲು ಸೂರಜ್, ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಹೃದಯಾಘಾತಕ್ಕೆ ಮತ್ತೊಂದು ಬಲಿ- 24 ವರ್ಷದ ಯುವತಿ ಸಾವು