ಲಕ್ನೋ: ಉತ್ತರ ಪ್ರದೇಶದ ಬುಲಂದ್ಯಹರ್ನಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ನಂತರ ಒಂದು ಕಾರು ಬೆಂಕಿಗೆ ಆಹುತಿಯಾಗಿದೆ .
ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ನಂತರ ಬೆಂಕಿ ಹತ್ತಿಕೊಂಡಿದೆ. ಕಾರಿನೊಳಗೆ ಆರು ಜನರಿದ್ದರು. ಅವರಲ್ಲಿ ಐದು ಮಂದಿ ಸಜೀವ ದಹನವಾಗಿದ್ದರು. ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಮುಂಜಾನೆ 5:50ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

