ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊವರ್ಶಿ ಕಾಲಿಗೆ ಪೆಟ್ಟಾಗಿದ್ದು, ಕೂಡಲೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಗಾಯದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಸಿಗಬೇಕಿದೆ. ಬಾಲಿವುಡ್ ಬೆಡಗಿಗೆ ಪೆಟ್ಟಾಗಿರುವ ವಿಷಯ ತಿಳಿದು ಅಭಿಮಾನಿಗಳು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ವಿಧಿವಶ
ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ನಟಿ ಚಾಂದಿನಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ ವಶಕ್ಕೆ

