By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್ಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್ಡಿಕೆ

LatestMain PostTop Storiesರಾಜ್ಯ-Karnataka

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್ಡಿಕೆ

US Consulate in Bengaluru: HDK meets Jaishankar and thanks him

Published January 16, 2025
Share
2 Min Read
US Consulate in Bengaluru: HDK meets Jaishankar and thanks him
SHARE

ನವದೆಹಲಿ: ಉದ್ಯಾನನಗರಿ ಹಾಗೂ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಗುರುವಾರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು.

ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ನಾಳೆ (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು, ಅದಕ್ಕೆ ಮುನ್ನ ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್ ನಲ್ಲಿರುವ ಅವರ ಕಚೇರಿಯಲ್ಲಿಯೇ ಭೇಟಿಯಾದ ಸಚಿವರು; ಕನ್ನಡಿಗರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಭಾರತದ ತಂತ್ರಜ್ಞಾನ ಮತ್ತು ಆವಿಷ್ಕಾರಗಳ ಕೇಂದ್ರ ಸ್ಥಾನವಾಗಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿರುವ ಬೆಂಗಳೂರು, ಯುಎಸ್ ಕಾನ್ಸುಲೇಟ್ ಸ್ಥಾಪನೆಯೊಂದಿಗೆ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈ ಮಹತ್ವದ ಬೆಳವಣಿಗೆ ಬೆಂಗಳೂರಿಗೆ ಹೊಸ ಅಧ್ಯಾಯ ಆರಂಭವಾಗಿದೆ ಮಾತ್ರವಲ್ಲದೆ, ಈ ಕನಸನ್ನು ನನಸಾಗಿಸಲು ಅವಿರತವಾಗಿ ಶ್ರಮಿಸಿದ ಹಲವು ನಾಯಕರ ನಿರಂತರ ಶ್ರಮಕ್ಕೆ ಸಿಕ್ಕ ಗೆಲುವಾಗಿದೆ.

ಬೆಂಗಳೂರಿನಲ್ಲಿ 2006ರಿಂದಲೂ ಸ್ಥಾಪನೆ ಮಾಡಿಸುವ ಬಗ್ಗೆ ತಾವು ನಡೆಸಿದ ಪ್ರಯತ್ನಗಳ ಬಗ್ಗೆ ಸಚಿವ ಜೈಶಂಕರ್ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡ ಕುಮಾರಸ್ವಾಮಿ ಅವರು, ಅಂದಿನ ಯುಪಿಎ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅನ್ಯರಾಜ್ಯವೊಂದರ ಮುಖ್ಯಮಂತ್ರಿಯ ಒತ್ತಡಕ್ಕೆ ಮಣಿದ ಸರಕಾರ ಅವರ ರಾಜ್ಯಕ್ಕೆ ಯುಎಸ್ ಕಾನ್ಸುಲೇಟ್ ಹೋಯಿತು. ಈ ವಿಷಯವನ್ನು ಸ್ವತಃ ಜೈಶಂಕರ್ ಅವರೇ ಸಚಿವರ ಜತೆ ಹಂಚಿಕೊಂಡರು.

ಅಲ್ಲದೆ, ಕುಮಾರಸ್ವಾಮಿ ಅವರು 2018 ಮೇ 31ರಂದು ಕರ್ನಾಟಕ ಮುಖ್ಯಮಂತ್ರಿ ಆಗಿದ್ದಾಗ ಆಗಿನ ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನೆತ್ ಜಸ್ಟರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆಯ ಬೇಡಿಕೆಯನ್ನು ಪ್ರಸ್ತಾಪಿಸಿದ್ದರು. ಆಗ ಹೆಚ್ಡಿಕೆ ಅವರ ಮನವಿಗೆ ಜಸ್ಟರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಬೆಂಗಳೂರು ಇಡೀ ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದ್ದು, ವಿಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಮಾಹಿತಿ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳು ಅಗಾಧವಾಗಿ ಬೆಳೆದಿವೆ. ಮುಖ್ಯವಾಗಿ ಅಮೆರಿಕದ ಜತೆ ಕರ್ನಾಟಕ ನಿಕಟ ಸಂಪರ್ಕ ಹೊಂದಿದೆ. ಹೀಗಾಗಿ ನಗರದಲ್ಲಿ ಅಮೆರಿಕ ಕಾನ್ಸುಲೇಟ್ ಸ್ಥಾಪನೆ ಅತ್ಯಗತ್ಯ ಎಂದು ಜಸ್ಟರ್ ಅವರಿಗೆ ಕುಮಾರಸ್ವಾಮಿ ಅವರು ವಿವರಿಸಿದ್ದರು. ಅದಕ್ಕೆ ಅಗತ್ಯವಾದ ಪೂರಕ ಮಾಹಿತಿ, ದಾಖಲೆಗಳನ್ನು ಕೂಡ ಅಂದಿನ ಮುಖ್ಯಮಂತ್ರಿ ಹೆಚ್ಡಿಕೆ ಅವರು ಅಮೆರಿಕ ರಾಯಭಾರಿಗೆ ನೀಡಿದ್ದರು.

ಏತನ್ಮಧ್ಯೆ; ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಸ್ಥಾಪನೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆ ಇದೆ ಎಂದು ಹೇಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ವಿದೇಶಾಂಗ ಜೈಶಂಕರ್ ಅವರ ಸಹಕಾರವನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ.

ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ತೆರೆಯುವುದರಿಂದ ಭಾರತ ಮತ್ತು ಅಮೆರಿಕದ ನಡುವಿನ ರಾಜತಾಂತ್ರಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು ಮತ್ತಷ್ಟು ಬಲವಾಗುತ್ತವೆ. ತಂತ್ರಜ್ಞಾನ, ವ್ಯಾಪಾರ, ಶಿಕ್ಷಣ ಮತ್ತು ಆವಿಷ್ಕಾರದಲ್ಲಿ ಸಹಕಾರವನ್ನು ಹೆಚ್ಚಿಸುವ ದಿಕ್ಕಿನಲ್ಲಿ ಇದು ಮಹತ್ವದ ಪ್ರವೇಶದ್ವಾರವಾಗಿರುತ್ತದೆ. ಪ್ರಧಾನಿಗಳ ‘ವಿಕಸಿತ ಭಾರತ 2047’ ಗುರಿ ಸಾಕಾರ ನಿಟ್ಟಿನಲ್ಲಿ ಉಪಕ್ರಮ ಬಹಳ ಪ್ರಮುಖ ಪಾತ್ರ ವಹಿಸಲಿದೆ.

You Might Also Like

ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ

ಪಹಲ್ಗಾಮ್​​ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡಲಾಗಿದೆ : ಅಮಿತ್ ಶಾ ಅಧಿಕೃತ ಘೋಷಣೆ

BREAKING : ತಮಿಳುನಾಡಿನ ಕರೂರಿನಲ್ಲಿ ವಿಜಯ್‌ ದಳಪತಿ ಪಕ್ಷದ ರ‍್ಯಾಲಿಯಲ್ಲಿ ಕಾಲ್ತುಳಿತ : 30ಕ್ಕೂ ಹೆಚ್ಚು ಮಂದಿ ಸಾವು

ವೇಗಸ್‌ನಲ್ಲಿ ಟ್ರಂಪ್‌ ಹೋಟೆಲ್‌ ಎದುರು ಹೊತ್ತಿ ಉರಿದ ಟೆಸ್ಲಾ ಸೈಬರ್‌ಟ್ರಕ್

TAGGED:#Bengaluruhd kumaraswamyS JaishankarUS Consulate
Share This Article
Facebook Copy Link Print
Previous Article BDA operation: 19 properties seized in Nadaprabhu Kempegowda Layout ಬಿಡಿಎ ಕಾರ್ಯಾಚರಣೆ : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 19 ಆಸ್ತಿ ವಶ
Next Article MC Sudhakar ಒಮ್ಮೆಗೇ ಐದು ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up