ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್ಸಿಎಸ್ಪಿ (SSP), ಟಿಎಸ್ಪಿ (TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.
ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್ಗೆ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: 12 ವರ್ಷದ ಬಾಲಕನ ಭೀಕರ ಹತ್ಯೆ- ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು
ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಈ ಹಿಂದೆ ಆರೋಪಿಸುವುದರೊಂದಿಗೆ ಆಗಸ್ಟ್ನಲ್ಲಿ ಪ್ರತಿಭಟನೆ ಕೂಡ ಮಾಡಲಾಗಿತ್ತು. ಇದನ್ನೂ ಓದಿ: ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ
ಯಾವ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಳಸಲಾಗಿದೆ?
* ಗೃಹಲಕ್ಷ್ಮೀ ಯೋಜನೆಗೆ 7,881.91 ಕೋಟಿ ರೂ.
* ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
* ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
* ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ.
* ಅನ್ನಭಾಗ್ಯ ಯೋಜನೆಯ 2,187 ಕೋಟಿ ರೂ.
* ಶಕ್ತಿ ಯೋಜನೆಗೆ 1451.45 ಕೋಟಿ ರೂ.
* ಯುವನಿಧಿ ಯೋಜನೆಗೆ 175.50 ಕೋಟಿ ರೂ.