ಬೆಂಗಳೂರು ಜ.8: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ ತಮಿಳುನಾಡು ಮೂಲದ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ವಿ ನಾರಾಯಣನ್ ಅವರು ಎಸ್ ಸೋಮನಾಥ್ ಅವರ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.
ಸಂಪುಟದ ನೇಮಕಾತಿ ಸಮಿತಿಯ ಆದೇಶದ ಪ್ರಕಾರ, ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರ ಅಧಿಕಾರ ಅವಧಿ ಜನವರಿ 14 ರಂದು ಪೂರ್ಣಗೊಳ್ಳಲಿದೆ. ಈ ಸ್ಥಾನಕ್ಕೆ ಇದೇ ದಿನ ವಿ ನಾರಾಯಣನ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿ ನಾರಾಯಣನ್ ಅವರು ಮುಂದಿನ ಎರಡು ವರ್ಷಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ಇಸ್ರೋ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ