ಅಗ್ನಿಸಾಕ್ಷಿ, ಸೀತಾ ರಾಮ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ನಟಿ ವೈಷ್ಣವಿ ಗೌಡ ಇದೀಗ ಹಸೆಮಣೆ ಏರಿದ್ದಾರೆ. ಕಳೆದ ತಿಂಗಳು ಏಪ್ರಿಲ್ 14ರಂದು ವೈಷ್ಣವಿ ಅವರು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅನುಕೂಲ್ ಮಿಶ್ರಾ ಜೊತೆಗೆ ಹಿರಿಯರ ಸಮ್ಮುಖದಲ್ಲಿ ಒಬ್ಬರೊಬ್ಬರು ಉಂಗುರ ಬದಲಾಯಿಸಿಕೊಂಡಿದ್ದರು.
ಮದುವೆ ಬೆನ್ನಲ್ಲೇ ವೈಷ್ಣವಿ ಗೌಡ ಅವರು ಸುಂದರ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೂನ್ 4 ರಂದು ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ವೈಷ್ಣವಿ ಗೌಡ – ಅನುಕೂಲ್ ಮಿಶ್ರಾ ವಿವಾಹ ಮಹೋತ್ಸವ ಗ್ರ್ಯಾಂಡ್ ಆಗಿ ನೆರವೇರಿದೆ. ಬಳಿಕ ನವದಂಪತಿಗಳ ರಿಸೆಪ್ಷನ್ ಕಾರ್ಯಕ್ರಮ ಕೂಡ ಅದ್ಧೂರಿಯಾಗಿ ಜರುಗಿತು. ಕನ್ನಡ ಕಿರುತೆರೆಯ ಹಲವು ತಾರೆಯರು ಆಗಮಿಸಿ ಶುಭಾಶಯ ಕೋರಿದ್ದಾರೆ. ವಿವಾಹ ಸಮಾರಂಭಕ್ಕೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಅನೇಕರು ಸಾಕ್ಷಿ ಆಗಿದ್ದಾರೆ. ಮದುವೆ ಬೆನ್ನಲ್ಲೇ ವೈಷ್ಣವಿ ಗೌಡ ಅವರು ಸುಂದರ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.






