ಬೆಂಗಳೂರು: ಬಹುಕೋಟಿ ರೂಪಾಯಿ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ (Valmiki corporation sacm) ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 16 ಕೆಜಿ ಚಿನ್ನ ಮತ್ತು 10 ಕೋಟಿ ರೂ. ನಗದನ್ನು ವಶ ಪಡಿಸಿಕೊಳ್ಳಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT), ನಕಲಿ ಖಾತೆ ತೆರೆದ ಆರೋಪದಲ್ಲಿ ಸತ್ಯನಾರಾಯಣ ವರ್ಮ (Satyanarayana Verma) ಎಂಬಾತನನ್ನು ಹೈದರಾಬದ್ನಲ್ಲಿ (Hyderabad) ಬಂಧಿಸಿದೆ. ಈತ ವಿವಿಧ ಕಂಪನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ಎಲ್ಲಾ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು. ಇದನ್ನೂ ಓದಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ:ಜಮ್ಮು ಕಾಶ್ಮೀರದ 3 ದಿನಗಳಲ್ಲಿ 3ನೇ ಉಗ್ರ ದಾಳಿ – ದೋಡಾ ದ ಸೇನಾ ಪೋಸ್ಟ್ ಮೇಲೆ ದಾಳಿ
ಇಂದು ಸತ್ಯನಾರಾಯಣನನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ. ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ