ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ (Karnataka Maharshi Valmiki Scheduled Tribe Development Corporation Ltd) ಸಚಿವ ನಾಗೇಂದ್ರ (Nagendra) ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಬಿಜೆಪಿ ಆಗ್ರಹ ಮಾಡಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂಗೆ ಆಗ್ರಹಿಸಿರುವ ಬಿಜೆಪಿ, ಒಂದು ವೇಳೆ ನಾಗೇಂದ್ರ ರಾಜೀನಾಮೆ ಪಡೆಯದೇ ಹೋದ್ರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆಯನ್ನು ಕೂಡ ನೀಡಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ
ಈಗಾಗಲೇ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಐಆರ್ ದಾಖಲಿಸಿದೆ. ನಿಮ್ಮಲ್ಲಿ ಅಲ್ಪಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಇನ್ನಾದರೂ ಸಂಬಂಧಪಟ್ಟ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು.ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್ – ಡ್ರಗ್ಸ್ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!
ಸಚಿವ ನಾಗೇಂದ್ರ ರಾಜಿನಾಮೆ ನೀಡುವವರೆಗೂ ಬಿಜೆಪಿ (BJP) ಹೋರಾಟವನ್ನು ಮುಂದುವರಿಸುತ್ತದೆ ಹಾಗೂ ಇನ್ನೂ ತೀವ್ರಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್ ಈಶ್ವರ್ ಮೊಬೈಲ್ ಸ್ವಿಚ್-ಆಫ್