ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation Scam) ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಹಾಗೂ ಶಾಸಕ ಬಸನಗೌಡ ದದ್ದಲ್ (Basanagouda Daddal) ಮನೆ ಮೇಲೆ ಇಡಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣ- ರಾಜಕಾರಣಿ ಪುತ್ರ ಬಂಧನ
ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ – ವಿಕೃತ ಕಾಮಿ ಬಂಧನ
ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಇಂದು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ ಆಟೋ ವ್ಹೀಲಿಂಗ್ ಮಾಡ್ತಿದ್ದ ಡ್ರೈವರ್- ಚಾಲಕ ಬಂಧನ