ಶಿವಮೊಗ್ಗ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು (Superintendent’s suicide case) ರಾಜ್ಯ ಸರ್ಕಾರ ನಿನ್ನೆ ಎಸ್‍ಐಟಿ ತನಿಖೆಗೆ ನೀಡಿದೆ
ಚಂದ್ರಶೇಖರನ್ ಅವರ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ ಮೃತ ಚಂದ್ರಶೇಖರನ್ ಅವರ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರಾಗಿದೆ. ಇದನ್ನೂ ಓದಿ: ಇಂದು ಭವಾನಿ ರೇವಣ್ಣವಿಚಾರಣೆಗೆ ಗೈರು – ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಭವಾನಿ
ಕವಿತಾ ಅವರು ಬೆಳಗ್ಗೆಯಿಂದ ವಾಂತಿ ಮತ್ತು ಸುಸ್ತಿನಿಂದ ಬಳಲಿದ್ದಾರೆ. ಬಳಿಕ ಕುಟುಂಬಸ್ಥರು ಕವಿತಾರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಮುಂದುವರಿದ ಬಾಂಬ್ ಬೆದರಿಕೆಗಳು -ಇಂಡಿಗೋ ವಿಮಾನಕ್ಕೆ ಮತ್ತೆ ಬೆದರಿಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾದ ಸಾಗರ ನಗರ ಘಟಕದ ಅಧ್ಯಕ್ಷ ಪರಶುರಾಮ್ ನೇತೃತ್ವದಲ್ಲಿ ಸಾಗರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದು, ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವಹಿಸಲು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ