ಬೆಂಗಳೂರು: ಎಸ್‌ಟಿ ನಿಗಮ ಹಗರಣ ಪ್ರಕರಣದ ತನಿಖೆಗೆ ಎಸ್‌ಐಟಿ (SIT) ರಚನೆ ಬಳಿಕ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ. ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಬಂಧಿಸಿದೆ.
ಶುಕ್ರವಾರ ರಾತ್ರಿ ಪದ್ಮನಾಭ್ ಮತ್ತು ಪರಶುರಾಮ್‌ನನ್ನು ಎಸ್‌ಐಟಿ ಬಂಧಿಸಿದ್ದು, ಇಂದು ಮಧ್ಯಾಹ್ನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ
ಹಗರಣ ಬೆಳಕಿಗೆ ಬಂದ ಬಳಿಕ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಎಸ್ಕೇಪ್ ಆಗಿದ್ದರು. ಬೆಂಗಳೂರು ಹೊರವಲಯದಲ್ಲಿ ಅವರನ್ನು ಬಂಧಿಸಲಾಗಿದೆ. ಇಂದು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಎಸ್‌ಐಟಿ ತನ್ನ ಕಸ್ಟಡಿಗೆ ಪಡೆಯಲಿದೆ. . ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 69.50 ರೂ. ಇಳಿಕೆ