ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು ನಿಜ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK̤Shivakumar) ಒಪ್ಪಿಕೊಂಡಿದ್ದಾರೆ.
ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಅಧಿಕಾರವವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಜ. ಹಾಗೆಂದು ಪ್ರಕರಣದಲ್ಲಿ ನಮ್ಮ ಸಚಿವರು, ಶಾಸಕರು ಯಾರೂ ಶಾಮೀಲಾಗಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.
ಸಿಐಡಿ ಈಗಾಗಲೇ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಸಿಐಡಿ ಅಧಿಕಾರಿಗಳಿಗೆ ತನಿಖೆ ನಡೆಸಲು ಫ್ರೀ ಹ್ಯಾಂಡ್ ನೀಡಿದ್ದೇವೆ. ಇನ್ನೂ ಈ ಪ್ರಕರಣ ಸಂಬಂಧ ಮಂತ್ರಿಯಿಂದ ರಾಜೀನಾಮೆ ಪಡೆದಿದ್ದೇವೆ ಎಂದರು. ಇದನ್ನೂ ಓದಿ: ಬರ್ತಡೇ ದಿನವೇ ಸಾವಿಗೀಡಾದ ಕಾಲೇಜು ವಿದ್ಯಾರ್ಥಿನಿ
ಜೊತೆಗೆ ತನಿಖೆಗೆ ಸಹಕಾರ ನೀಡುವುದಾಗಿ ಹೇಳಿ ರಾಜೀನಾಮೆ ನೀಡಿದ್ದಾರೆ. ಅಧಿಕಾರಿಗಳು ಶಾಮೀಲಾಗಿರುವುದು ಗೊತ್ತಾಗಿದೆ. ಆದರೆ ಅಧಿಕಾರಿಗಳ ಆಡಿಯೋ ವಿಡಿಯೋ ಬಗ್ಗೆ ಗೊತ್ತಿಲ್ಲ ಎಂದರು.
ರಾಮನಗರ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಜಿಲ್ಲೆಯ ಹೆಸರು ಬದಲಿಸುವಂತೆ ಮನವಿ ಮಾಡಿದ ಬಗ್ಗೆ ಮಾತನಾಡಿದ ಅವರು, ರಾಮನಗರ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್ – ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಸಚಿವ ಎಂಬಿ ಪಾಟೀಲ್ ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಸರ್ವೆ ಮಾಡಿ 2032ಕ್ಕೆ ವರದಿ ನೀಡಲಿದ್ದಾರೆ. ಅಷ್ಟೊತ್ತಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಬೆಂಗಳೂರಿಗೆ ಪರ್ಯಾಯ ಮಾರ್ಗ ಮಾಡಬೇಕಾಗುತ್ತದೆ. ಆ ದೃಷ್ಟಿಯಿಂದ ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಇದನ್ನೂ ಓದಿ:

