ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಇಡಿ ತನಿಖೆ ಬೆನ್ನಲ್ಲೇ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಚಂದ್ರಶೇಖರ್ ಅವರು ಬರೆದ ಡೆತ್ನೋಟ್ನಲ್ಲಿ ಸಾಯಿತೇಜ ಎಂಬುವರ ಹೆಸರು ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇತನ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂಬುವುದು ತಿಳಿದುಬಂದಿದೆ. ಇದನ್ನೂ ಓದಿ: ನಟ ದರ್ಶನ್ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ
ಸದ್ಯ ಸಾಯಿತೇಜ್‌ನನ್ನು ಇಂದು ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಸಾಯಿತೇಜ ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾ ಸಹಚರನಾಗಿದ್ದು, ಹೈದ್ರಾಬಾದ್ನ ಕೋ-ಆಪರೇಟಿವ್ ಬ್ಯಾಂಕ್ ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಸಾಯಿತೇಜ್ ಬಂಧನದಿಂದ ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆಯಿದೆ. ತನ್ಮೂಲಕ ಪ್ರಕರಣಕ್ಕೆ ಪ್ರಮುಖ ತಿರುವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ
ಈಗಾಗಲೇ ಎಸ್‌ಐಟಿ ಅಧಿಕಾರಿಗಳು ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್ ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 13.92 ಕೋಟಿ ರು. ನಗದು ಹಾಗೂ 272 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.