By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ
EntertainmentLatestMain PostTop Storiesಸ್ಯಾಂಡಲ್​ವುಡ್-Sandalwood

ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ

Veteran Kannada Actor Sarigama Viji passes away

Published January 15, 2025
Share
2 Min Read
Sarigama Viji
SHARE

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್‌ ಅಧಿಕೃತವಾಗಿ ತಿಳಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು.

ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜನವರಿ 16 ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.

ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಸಾಗಿದ ವಿಜಿ ಅವರು 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

‘ಡಕೋಟಾ ಎಕ್ಸ್‌ಪ್ರೆಸ್’ ಅವರು ನಟಿಸಿದ ಕೊನೆಯ ಸಿನಿಮಾ. 250ಕ್ಕೂ ಅಧಿಕ ಸಿನಿಮಾಗಳಲ್ಲಿ ಸರಿಗಮ ವಿಜಿ ನಟಿಸಿದ್ದರು. 75ಕ್ಕೂ ಅಧಿಕ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿದ್ದರು. ಟೈಗರ್ ಪ್ರಭಾಕರ್ ಹಾಗೂ ವಿಜಿ ಕಾಂಬಿನೇಷನ್ ಸೂಪರ್ ಹಿಟ್ ಆಗಿತ್ತು. ಪ್ರಭಾಕರ್ ಆಪ್ತ ಬಳಗದಲ್ಲಿನ ಕೂಡ ಅವರು ಗುರ್ತಿಸಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗಳಿಂದ ದೂರ ಉಳಿದಿದ್ದರು.

You Might Also Like

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ

ಯುವ ಡಿವೋರ್ಸ್‌ ಕೇಸ್‌ ಆ.23ಕ್ಕೆ ಮುಂದೂಡಿಕೆ

ನ. 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ

ಸಿಎಂ ಸಿದ್ದು-ಡಿಕೆಶಿ ನಡುವಿನ ಪವರ್‌ ಶೇರಿಂಗ್‌ ಜಟಾಪಟಿಗೆ ತಾತ್ಕಾಲಿಕ ಬ್ರೇಕ್‌

TAGGED:Kannada ActorSarigama Viji
Share This Article
Facebook Copy Link Print
Previous Article ದಕ್ಷಿಣ ಆಫ್ರಿಕಾದ ರಾಷ್ಟ್ರವಾದ ಲೆಸೊಥೊಗೆ 1000 ಮೆಟ್ರಿಕ್ ಟನ್ ಜೋಳ ಕಳುಹಿಸಿದ ಭಾರತ
Next Article ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up